ಅಸ್ಸಾಂ ಬಿಜೆಪಿ ಸರ್ಕಾರದ ನಿರ್ಧಾರಕ್ಕೆ ಹಿಂ ದೂಗಳು ಖುಷ್ ; ಮು ಸ್ಲಿಂ ಸಂ ಘಟನೆಗಳು ಕಕ್ಕಾಬಿಕ್ಕಿ!

ಗುವಾಹಟಿ: ಅಸ್ಸಾಂನಲ್ಲಿ ಸರ್ಕಾರಿ ಹಾಗೂ ಅನುದಾನಿತ ಮದರಸಾಗಳನ್ನು ಬಂದ್‌ ಮಾಡಲು ಹಾಗೂ ‘ಲ ವ್‌ ಜಿ ಹಾದ್‌’ ಮೂಲಕ ನಡೆದ ಮದುವೆಗಳನ್ನು ರದ್ದುಪಡಿಸಲು ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ನಿರ್ಧರಿಸಿದ್ದು, ಮು ಸ್ಲಿಂ ಸಂ ಘಟನೆಗಳಿಂದ ವಿರೋಧ ವ್ಯಕ್ತವಾಗಿದೆ. ಇದೇ ವೇಳೆ, ಸರ್ಕಾರಿ ಹಾಗೂ ಅನುದಾನಿತ ಸಂಸ್ಕೃತ ಪಾಠಶಾಲೆಗಳನ್ನೂ ಮುಚ್ಚಲು ಸರ್ಕಾರ ನಿರ್ಧರಿಸಿದ್ದು, ಸರ್ಕಾರದ ವೆಚ್ಚದಲ್ಲಿ ಯಾವುದೇ ಧಾರ್ಮಿಕ ಶಿಕ್ಷಣ ನೀಡುವುದಿಲ್ಲ ಎಂದು ಪ್ರಕಟಿಸಿದೆ. ಮೋ ಸದ ಮದುವೆಗೆ ಬ್ರೇಕ್‌: ‘ಇತ್ತೀಚೆಗೆ ರಾಜ್ಯದಲ್ಲಿ ಹೆಚ್ಚುತ್ತಿರುವ ಮೋಸದ ಮದುವೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಬಹಳಷ್ಟು ಮುಸ್ಲಿಂ ಯುವಕರು ಫೇಸ್‌ಬುಕ್‌ನಲ್ಲಿ ಹಿಂದು ಹೆಸರಿನಲ್ಲಿ ಪ್ರೊಫೈಲ್‌ ಸೃಸ್ಟಿಸಿಕೊಳ್ಳುತ್ತಾರೆ. ಅದರಲ್ಲಿ ದೇವಸ್ಥಾನದಲ್ಲಿ ನಿಂತಿರುವ ಫೋಟೋ ಪೋಸ್ಟ್‌ ಮಾಡುತ್ತಾರೆ.

ನಂತರ ಹಿಂದು ಹುಡುಗಿಯರನ್ನು ಬಲೆಗೆ ಬೀಳಿಸಿಕೊಂಡು ಮದುವೆಯಾಗುತ್ತಾರೆ. ಆ ಯುವತಿಗೆ ಮದುವೆಯಾದ ನಂತರವಷ್ಟೇ ತಾನು ಮೋಸಹೋಗಿದ್ದೇನೆ ಎಂಬುದು ಗೊತ್ತಾಗುತ್ತದೆ. ಇದು ವಂಚನೆಯ ಮದುವೆ. ನಮ್ಮ ಸರ್ಕಾರ ಅ ನ್ಯಧರ್ಮೀಯ ಮದುವೆಗೆ ವಿರುದ್ಧವಾಗಿಲ್ಲ. ಆದರೆ, ವಂಚನೆಯ ಮದುವೆಯಿಂದ ನಮ್ಮ ಸೋದರಿಯರು ಮತ್ತು ಹೆಣ್ಮಕ್ಕಳನ್ನು ರಕ್ಷಿಸುವುದು ನಮ್ಮ ಕರ್ತವ್ಯ. ಇಂತಹ ಮದುವೆಗಳು ಮುಸ್ಲಿಂ ಸಂಪ್ರದಾಯದಂತೆ ನಡೆದಿದ್ದರೂ ಅವುಗಳನ್ನು ರದ್ದುಪಡಿಸಲಾಗುವುದು’ ಎಂದು ಶಿಕ್ಷಣ ಮತ್ತು ಹಣಕಾಸು ಸಚಿವ ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದಾರೆ. ರಾಜ್ಯದಲ್ಲಿ ಸರ್ಕಾರಿ ಮತ್ತು ಅನುದಾನಿತ ಮದರಸಾಗಳನ್ನು ಹಾಗೂ ಸಂಸ್ಕೃತ ಶಾಲೆಗಳನ್ನು ಮುಚ್ಚಲಾಗುವುದು. ಸರ್ಕಾರದ ವೆಚ್ಚದಲ್ಲಿ ಧಾರ್ಮಿಕ ಶಿಕ್ಷಣ ನೀಡಲು ಸಾಧ್ಯವಿಲ್ಲ ಎಂದು ಈ ಹಿಂದೆಯೇ ವಿಧಾನಸಭೆಯಲ್ಲಿ ನಿರ್ಧಾರ ಕೈಗೊಂಡಿದ್ದೇವೆ. ಖಾಸಗಿ ಮದರಸಾ ಮತ್ತು ಸಂಸ್ಕೃತ ಶಾಲೆಗಳ ಬಗ್ಗೆ ನಾವೇನೂ ಹೇಳುವುದಿಲ್ಲ’ ಎಂದು ಶರ್ಮಾ ತಿಳಿಸಿದ್ದಾರೆ. ರಾಜ್ಯದಲ್ಲಿ 614 ಸರ್ಕಾರ ಮದರಸಾಗಳು ಹಾಗೂ ಸುಮಾರು 1000 ಸಂಸ್ಕೃತ ಪಾಠಶಾಲೆಗಳಿವೆ. ಮದರಸಾಗಳನ್ನು ಮುಚ್ಚಿದರೆ ಸರ್ಕಾರದ ವಿರುದ್ಧ ಹೋರಾಟ ನಡೆಸಲಾಗುವುದು ಮತ್ತು ನಾವು ಅಧಿಕಾರಕ್ಕೆ ಬಂದ ಮೇಲೆ ಮತ್ತೆ ಅವುಗಳನ್ನು ತೆರೆಯಲಾಗುವುದು ಎಂದು ಆಲ್‌ ಇಂಡಿಯಾ ಯುನೈಟೆಡ್‌ ಡೆಮಾಕ್ರೆಟಿಕ್‌ ಫ್ರಂಟ್‌ ಪಕ್ಷದ ಸಂಸದ ಬದ್ರುದ್ದೀನ್‌ ಅಜ್ಮಲ್‌ ಹೇಳಿದ್ದಾರೆ.

ಇದನ್ನೂ ಓದಿ :  28 ವರ್ಷಗಳಿಂದ ತನ್ನ ಮಗನನ್ನು ಕೋಣೆಯೊಂದರಲ್ಲಿ ಕೂಡಿಹಾಕಿದ ತಾಯಿ! ; ಇಲ್ಲಿದೆ ಭಯಾನಕ ಕಾರಣ!

ಜಾಹಿರಾತು : ವಾಕ್ ಸಿದ್ಧಿ ಜಪ ಸಿದ್ಧಿ ಯಂತ್ರ ಸಿದ್ಧಿ ಹಾಗೂ ಮಂತ್ರ ಸಿದ್ಧಿಯಲ್ಲಿ ಪರಿಣಿತಿ ಹೊಂದಿರುವ ಪಂಡಿತ್ ಶ್ರೀ ರಾಘವೇಂದ್ರ ಶರ್ಮಾ (ಕಟೀಲು) ಇವರು ವಶೀಕರಣ ಮಹಾ ಮಾಂತ್ರಿಕರು ಹಾಗೂ ಸರ್ವಸಿದ್ಧಿ ಸಾಧಕರಾದ ಇವರು ನಿಮ್ಮ ಧೀರ್ಘ ಕಾಲದ ಸಮಸ್ಯೆಗಳಿಗೆ ಮೂರೂ ದಿನದಲ್ಲಿ ಶಾಶ್ವತ ಪರಿಹಾರ ನೀಡುತ್ತಾರೆ. ಪ್ರೀತಿ ಪ್ರೇಮದ ಸಮಸ್ಯೆಗಳು ಅಥವ ಒಳ್ಳೆಯ ಸರ್ಕಾರೀ ಕೆಲಸ ಸಿಗಲು ಅಥವ ಹಣಕಾಸಿನ ಸಮಸ್ಯೆಗಳು ಅಥವ ಸ್ತ್ರೀ ವಶೀಕರಣ ಹಾಗೂ ಪುರುಷ ವಶೀಕರಣ ಆಗಲು ಇನ್ನು ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ಕೆಳಗೆ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ 9740202800 ವಿಳಾಸ : ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು.9740202800