ನೆಲೆಯಿಲ್ಲದ ಕೆಸರಿನಲ್ಲಿ ಅರಳಿದ ಕಮಲ!? ; ಕಾಂಗ್ರೆಸ್ ಅದ್ಯಕ್ಷಗಿರಿಗೆ  ರಾಜಿನಾಮೆ!ಹೈದರಾಬಾದ್: ಗ್ರೇಟರ್ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಆಡಳಿತರೂಢ ತೆಲಂಗಾಣ ರಾಷ್ಟ್ರ ಸಮಿತಿಗೆ ಬಹುಮತ ಸಿಕ್ಕಿಲ್ಲ. ಒಟ್ಟು 150 ವಾರ್ಡ್ ಗಳಿರುವ ಹೈದರಾಬಾದ್ ಪಾಲಿಕೆಯಲ್ಲಿ 56 ವಾರ್ಡ್ ಗಳಲ್ಲಿ ಟಿ.ಆರ್.ಎಸ್. ಪಕ್ಷ ಜಯಗಳಿಸಿದೆ. 49 ವಾರ್ಡ್ ಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ. 43 ವಾರ್ಡ್ ಗಳಲ್ಲಿ ಎಐಎಂಐಎಂ ಪಕ್ಷದ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಕಾಂಗ್ರೆಸ್ 2 ಸ್ಥಾನ ಮಾತ್ರ ಗಳಿಸಿದೆ. ಗ್ರೇಟರ್ ಹೈದರಾಬಾದ್ ಪಾಲಿಕೆಯಲ್ಲಿ ಟಿ.ಆರ್.ಎಸ್. ಗೆ ಎಐಎಂಐಎಂ ಬೆಂಬಲ ನೀಡುವ ಸಾಧ್ಯತೆ ಇದೆ. ಕಾಂಗ್ರೆಸ್ ಸೋಲಿನೊಂದಿಗೆ ರಾಜೀನಾಮೆ ರಾಜೀನಾಮೆ ಪರ್ವ ಶುರುವಾಗಿದೆ.

ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎನ್. ಉತ್ತಮ್ ಕುಮಾರ್ ರೆಡ್ಡಿ ರಾಜೀನಾಮೆ ನೀಡಿದ್ದಾರೆ. ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೋರೇಷನ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೀನಾಯವಾಗಿ ಸೋತ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಅವರು ರಾಜೀನಾಮೆ ನೀಡಿದ್ದಾರೆ. 150 ವಾರ್ಡ್ಗಳ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಕೇವಲ ಎರಡು ವಾರ್ಡ್ ಗಳಲ್ಲಿ ಮಾತ್ರ ಜಯಗಳಿಸಿದ ಹಿನ್ನಲೆಯಲ್ಲಿ ಅವರು ರಾಜೀನಾಮೆ ನೀಡಿದ್ದಾರೆ. ಇನ್ನು ನೆಲೆಯೇ ಇಲ್ಲದ ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದೆ. ಬರೋಬ್ಬರಿ 49 ವಾರ್ಡ್ ಗಳಲ್ಲಿ ಪಕ್ಷದ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಪಕ್ಷದ ಕಾರ್ಯಕರ್ತರ ಸಂಭ್ರಮಾಚರಣೆಯೂ ಜೋರಾಗಿದೆ ಎಂದು ಹೇಳಲಾಗಿದೆ. ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ್ದ ಬಿಜೆಪಿ ಪರವಾಗಿ ಘಟಾನುಘಟಿ ನಾಯಕರು ಪ್ರಚಾರ ಕೈಗೊಂಡಿದ್ದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕೇಂದ್ರ ಸಚಿವರಾದ ಪ್ರಕಾಶ್ ಜಾವಡೇಕರ್, ಸ್ಮೃತಿ ಇರಾನಿ, ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಸೇರಿದಂತೆ ಹಲವಾರು ಉನ್ನತ ನಾಯಕರು ಹೈದರಾಬಾದ್ ನಲ್ಲಿ ಪ್ರಚಾರ ನಡೆಸಿದ್ದರು. ಟಿ.ಆರ್.ಎಸ್. ಕಾರ್ಯಕಾರಿ ಅಧ್ಯಕ್ಷ ಮತ್ತು ರಾಜ್ಯ ಪುರಸಭೆ ಆಡಳಿತ ಸಚಿವ ಕೆ.ಟಿ. ರಾಮರಾವ್ ಅವರು ಆಡಳಿತ ಪಕ್ಷದ ಅಭಿಯಾನದ ನೇತೃತ್ವ ವಹಿಸಿದ್ದರೆ, ಪಕ್ಷದ ಅಧ್ಯಕ್ಷ ಮತ್ತು ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ಸಾರ್ವಜನಿಕ ಸಭೆಗಳಲ್ಲಿ ಭಾಗಿಯಾಗಿ ಪ್ರಚಾರ ನಡೆಸಿದ್ದರು. ಸಂಸದ ಒವೈಸಿ ಮತ್ತು ಅವರ ಶಾಸಕ ಸಹೋದರ ಅಕ್ಬರುದ್ದೀನ್ ಎಐಎಂಐಎಂ ಪರ ಪ್ರಚಾರ ನಡೆಸಿದ್ದರು.

ಜಾಹಿರಾತು: ವೆರಿಕೋಸ್ ವೇಯ್ನ್ ನಿಂದ ಬಳಲುತ್ತಿದ್ದೀರಾ? ಚಿಂತೆ ಬಿಡಿ ವೆರಿಕೋಸ್ ವೇಯ್ನ್ ಗೆ ಆಪರೇಷನ್ ಇಲ್ಲದೆಯೇ ಚಿಕಿತ್ಸೆ ನೀಡುತ್ತಾರೆ ಖ್ಯಾತ ವೈದ್ಯ ಡಾ. ಉರಾಳ್. ಹೆಚ್ಚಿನ ಮಾಹಿತಿಗಾಗಿ ಈಗಲೇ ಸಂಪರ್ಕಿಸಿ ವೆರಿಕೋಸ್ ವೇಯ್ನ್ ರೋಗಿಗಳ ಆಶಾಕಿರಣ ಆಪರೇಷನ್ ರಹಿತ ಆಯುರ್ವೇದ ಪರಿಹಾರ. ಡಾ. ಉರಾಳ್ ವೆರಿಕೋಸ್ ವೇಯ್ನ್ ಆಯುರ್ವೇದ ಕ್ಯೂರ್ ಸಂಸ್ಥೆ ಶೃಂಗೇರಿ. +91 81053 71042 , 8310191364.
http://www.uralsayurveda.in https://www.facebook.com/DrUrals/