ಅಕ್ರಮ ಬಾಂಗ್ಲಾ ವಲಸಿಗರ ವಿರುದ್ದ ಕ್ರಮ: ಬಿಎಸ್ವೈಶಿವಮೊಗ್ಗ : ರಾಜ್ಯದಲ್ಲಿ ಬಾಂಗ್ಲಾ ವಲಸಿಗರು ಅಕ್ರಮವಾಗಿ ನೆಲೆಸಿದ್ದಾರೆ ಎಂಬುದು ನನ್ನ ಗಮನಕ್ಕೆ ಬಂದಿದೆ. ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಜಿಲ್ಲೆಯ ಶಿಕಾರಿಪುರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಬಾಂಗ್ಲಾ ಅಕ್ರಮ ವಲಸಿಗರನ್ನು ಹೊರಗೆ ಕಳುಹಿಸಲು ಯಾವ ಕ್ರಮ ಕೈಗೊಳ್ಳಬೇಕೋ ಅದನ್ನು ಕೈಗೊಳ್ಳುತ್ತೇನೆ. ನಾಳೆಯಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅನ್ ಲಾಕ್ ಜಾರಿಯಾಗಲಿದ್ದು, ಸಚಿವರು ಹಾಗೂ ಅಧಿಕಾರಿಗಳ ಜೊತೆ ಚರ್ಚಿಸಿ ಮುಂದಿನ ತೀರ್ಮಾನ ಮಾಡಲಾಗುವುದು ಎಂದಿದ್ದಾರೆ.

ರಾಜ್ಯದಲ್ಲಿ ಕಳೆದ ಬಾರಿಯಂತೆ ಈ ಬಾರಿಯೂ ಉತ್ತಮವಾಗಿ ಮುಂಗಾರು ಮಳೆ ಚನ್ನಾಗಿ ಆಗುತ್ತಿದೆ. ಈಗಾಗಲೇ ಭಗವಂತನ ದಯೆಯಿಂದ ಜಲಾಶಯಗಳಿಗೆ ನೀರು ಬರುತ್ತಿದೆ. ಮುಂಗಾರು ಮಳೆಯಿಂದ ಕೃಷಿ ಚಟುವಟಿಕೆಗಳು ಚುರುಕುಗೊಂಡಿವೆ. ಕಳೆದ ವರ್ಷದಂತೆ ಈ ವರ್ಷವೂ ಉತ್ತಮ ಮಳೆ ಬೆಳೆ ಆಗಲಿದ್ದು, ರೈತರು ನೆಮ್ಮದಿಯಿಂದ ಬದುಕುವ ಒಳ್ಳೆಯ ಕಾಲ ಬರಲಿ ಎಂದು ಭಗವಂತನಲ್ಲಿ ಪ್ರಾರ್ಥನೆ ಮಾಡುತ್ತೇನೆ ಎಂದು ಹೇಳಿದ್ದಾರೆ.