ಸಿಡಿ ಕೇಸ್ – ಹೈಕೋರ್ಟ್ ಕದ ತಟ್ಟಿದ ಸಂತ್ರಸ್ತ ಯುವತಿ, ಮತ್ತೆ ಹೊಸ ತಿರುವು ಕೊಟ್ಟ ಯುವತಿಬೆಂಗಳೂರು: ಇನ್ನೇನೂ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಕ್ಲೀನ್ ಚಿಟ್ ಸಿಗಲಿದೆ. ಎಸ್‍ಐಟಿ ಅತ್ಯಾಚಾರ ಪ್ರಕರಣದಲ್ಲಿ ಬಿ ರಿಪೋರ್ಟ್ ಸಲ್ಲಿಕೆಗೆ ಮುಂದಾಗಿದೆ ಎಂಬ ಸುದ್ದಿ ಬರುತ್ತಿದ್ದಂತೆ ಅತ್ಯಾಚಾರ ಪ್ರಕರಣದ ಸಂತ್ರಸ್ತ ಯುವತಿ ಮತ್ತೆ ಹೈ ಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ಎಸ್‍ಐಟಿ ಈಗ ನಡೆಸುತ್ತಿರುವ ತನಿಖೆಯ ಮೇಲೆ ನಂಬಿಕೆ ಇಲ್ಲ. ಈಗ ಇರುವ ಅಧಿಕಾರಿಗಳು ಪೂರ್ವಾಗ್ರಹ ಪೀಡಿತರಾಗಿ ತನಿಖೆ ನಡೆಸುತ್ತಿದ್ದಾರೆ ಎಂಬ ಅನುಮಾನ ಇದೆ. ಅಲ್ಲದೇ ಆರೋಪಿ ಪ್ರಭಾವಿ ಆಗಿರೋದರಿಂದ ಸರಿಯಾಗಿ ವಿಚಾರಣೆಯೂ ನಡೆಯುತ್ತಿಲ್ಲ ಎಂದು ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ. ಸದ್ಯ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಸರ್ಕಾರ ಮತ್ತು ಎಸ್‍ಐಟಿ ಮುಖ್ಯಸ್ಥರಿಗೆ ಉತ್ತರಿಸಲು ನೋಟಿಸ್ ನೀಡಿದೆ.

ಪೋಷಕರ ಭೇಟಿಗೆ ಒಪ್ಪದ ಯುವತಿ:
ಮೇ 27 ರಂದು ಸಿಡಿಯಲ್ಲಿದ್ದ ಯುವತಿ ತಂದೆ ಧಾರವಾಡ ಹೈಕೋರ್ಟ್ ನಲ್ಲಿ ನನ್ನ ಮಗಳನ್ನ ಹುಡುಕಿಕೊಡಿ ಎಂದು ಹೇಬಿಯಸ್ ಕಾರ್ಪಸ್ ಅರ್ಜಿಯನ್ನ ಸಲ್ಲಿಸಿದ್ದರು. ವೀಡಿಯೋ ವಿಚಾರಣೆ ವೇಳೆ, ನಾನು ಸುರಕ್ಷಿತವಾಗಿದ್ದೇನೆಂದು ಯುವತಿ ಹೇಳಿಕೆ ನೀಡಿದ್ದಾಳೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ನಾನು ಬೆಂಗಳೂರು ವಿಳಾಸದಲ್ಲಿ ಪ್ರಸ್ತುತ ವಾಸವಾಗಿರುತ್ತೇನೆ. ನಾನು ಸ್ವಂತ ಇಚ್ಛೆ ಇಂದ ವಾಸವಾಗಿದ್ದು, ನನಗೆ ಇಲ್ಲಿ ಇರುವುದಕ್ಕೆ ಯಾರದೇ ಒತ್ತಡ ಇರುವುದಿಲ್ಲ ಮತ್ತು ನನ್ನ ರಕ್ಷಣೆಗಾಗಿ ಬೆಂಗಳೂರು ನಗರದ ಪೋಲೀಸರು ಭದ್ರತೆಯನ್ನು ಒದಗಿಸುತ್ತಾರೆ ಹಾಗೂ ನಾನು ಸುರಕ್ಷಿತವಾಗಿ ಇರುತ್ತೇನೆ. ನಾನು ಪ್ರಾಪ್ತ ವಯಸ್ಕಳಿದ್ದು ನಾನು ಸದ್ಯ ನಮ್ಮ ತಂದೆ ತಾಯಿ ಬಳಿ ಹೋಗಲು ಇಚ್ಛಿಸುವುದಿಲ್ಲ. ಈ ಪ್ರಕರಣಗಳು ಮುಗಿದ ನಂತರ ನಾನು ಅವರನ್ನು ಭೇಟಿ ಆಗುತ್ತೇನೆ ಎಂದು ಹೇಳಿದ್ದರು.

ಇದನ್ನೂ ಓದಿ :  ಬುದ್ದಿ ಮುಚ್ಚಿದ ಕೆಂಡದಂತಾಗಿದೆ: ಮಾಜಿ ಸಿಎಂ

ಒಪ್ಪಿತ ಲೈಂಗಿಕ ಕ್ರಿಯೆನಾ?: ಪ್ರಕರಣದ ಆರಂಭದಲ್ಲಿ ಯುವತಿ ನನಗೆ ಗೊತ್ತೆ ಇಲ್ಲ ಎಂದು ಹೇಳುತ್ತಿದ್ದ ರಮೇಶ್ ಜಾರಕಿಹೊಳಿ ಆ ಯುವತಿ ನನಗೆ ಗೊತ್ತು ಅಂತ ಹೇಳಿದ್ದಾರೆ ಎನ್ನಲಾಗುತ್ತಿದೆ. ಆ ಯುವತಿ ಪ್ರಾಜೆಕ್ಟ್ ವಿಚಾರದಲ್ಲಿ ನನಗೆ ಪರಿಚಯ ಆಗಿದ್ದು ನಿಜ.ಅವಾಗಾವಾಗ ನಾನು ವಾಸವಾಗಿದ್ದ ಅಪಾರ್ಟ್ ಮೆಂಟ್ ಗೆ ಬರುತ್ತಿದ್ದಳು. ಅವಾಗ ಇಬ್ಬರು ಲೈಂಗಿಕ ಸಂಪರ್ಕದಲ್ಲಿ ಭಾಗಿಯಾಗಿದ್ದೀವಿ. ಅದು ಕೂಡ ಆಕೆಯ ಸಮ್ಮತಿಯ ಮೇರೆಗೆ ಎಂದು ಎಸ್‍ಐಟಿ ಮುಂದೆ ರಮೇಶ್ ಜಾರಕಿಹೊಳಿ ಹೇಳಿಕೆ ಕೊಟ್ಟಿದ್ದಾರೆ ಎಂದು ತಿಳಿದು ಬಂದಿದೆ