ಆರು ತಿಂಗಳಲ್ಲಿ ಸರ್ಕಾರ ಬಿದ್ದು ಹೋಗುತ್ತೆ ಭವಿಷ್ಯ‌ ನುಡಿದ ಕೈ ಶಾಸಕಶಿವಮೊಗ್ಗ: ಬಿಜೆಪಿಯವರ ಕಿತ್ತಾಟದಿಂದಲೇ ಈ ಸರ್ಕಾರ ಅಲುಗಾಡುತ್ತಿದೆ, ಇನ್ನು ಕೇವಲ 6 ತಿಂಗಳಲ್ಲಿ ಮತ್ತೇ ಚುನಾವಣೆ ನಡೆಯಲಿದೆ ಎಂದು ಭದ್ರಾವತಿಯ ಕಾಂಗ್ರೆಸ್ ಪಕ್ಷದ ಶಾಸಕ ಬಿ.ಕೆ.ಸಂಗಮೇಶ್ ಹೇಳಿದ್ದಾರೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು. ಈ ಸರ್ಕಾರ, ಇನ್ನು 6 ತಿಂಗಳಲ್ಲಿ ಸರ್ಕಾರ ಪತನವಾಗಲಿದೆ. ಸರ್ಕಾರಕ್ಕೆ ಜನರ ಬಗ್ಗೆ ಕಾಳಜಿ ಇಲ್ಲ, ಅವರು ಹಣ ಮಾಡುವುದಕ್ಕಾಗಿಯೇ ಅಧಿಕಾರದಲ್ಲಿ ಕುತಿದ್ದಾರೆ. ಬಿಜೆಪಿ ಶಾಸಕರಲ್ಲಿ ಈಗಾಗಲೇ ಒಳ ಜಗಳ-ಕಿತ್ತಾಟಗಳನ್ನು ನಾವೆಲ್ಲಾ ನೋಡುತ್ತಿದ್ದೇವೆ. 2022ರಲ್ಲಿ ಚುನಾವಣೆ ಆಗಬಹುದು ಎಂದರು ರಾಜ್ಯ ಸರ್ಕಾರದ ಆಡಳಿತವನ್ನು ಟೀಕಿಸಿದರು.

ಇದನ್ನೂ ಓದಿ :  ಲಡಾಖ್‌ ಗಡಿ ಬಳಿ ಮತ್ತೆ ಚೀನಾ ತಂಟೆ

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಯಾವುದೇ ಭ್ರಷ್ಟಾಚಾರ, ಹಗರಣ ನಡೆದಿಲ್ಲ. ಬದಲಿಗೆ 70 ವರ್ಷ ಅಧಿಕಾರ ನಡೆಸಿದ ಅವಧಿಯಲ್ಲಿ ಹಲವು ಅಭಿವೃದ್ಧಿ ಕೆಲಸ ಮಾಡಿದೆ. ಆದರೆ ಬಿಜೆಪಿಯವರು ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದ್ದಾರೆ. ಅವರ ಧರ್ಮದ ರಾಜಕಾರಣ ಈಗಾಗಲೇ ಜನರಿಗೆ ಗೊತ್ತಾಗಿದೆ. ಮುಂದಿನ ದಿನಗಳಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಪತನವಾಗಲಿದ್ದು, ಕಾಂಗ್ರೆಸ್ ಅಧಿಕಾರಕ್ಕೆ ಬರುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಶಾಸಕ ಬಿ.ಕೆ.ಸಂಗಮೇಶ್ ತಿಳಿಸಿದರು.