ಘಟಾನುಘಟಿ ಕಾಂಗ್ರೆಸ್ ನಾಯಕರು ಬಿಜೆಪಿ ಸೇರ್ಪಡೆ! : ರಾಜಕೀಯ ವಲಯದಲ್ಲಿ ಹೊಸ ಸಂಚಲನ.

ಬೆಂಗಳೂರು: ಆರ್.ಆರ್.ನಗರ ಹಾಗು ತುಮಕೂರಿನ ಶಿರಾ ಬೈ ಎಲೆಕ್ಷನ್ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಇದರ ಮಧ್ಯೆ ಪಕ್ಷಾಂತರ ಪರ್ವ ಸಹ ಭರ್ಜರಿಯಾಗಿ ಸಾಗಿದೆ. ಮೊನ್ನೆ ಅಷ್ಟೇ ರಾಜರಾಜೇಶ್ವರಿ ನಗರದ ಜೆಡಿಎಸ್-ಬಿಜೆಪಿ ನಾಯಕರು ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಇದೀಗ ಕಾಂಗ್ರೆಸ್ ಮುಖಂಡರು ಬಿಜೆಪಿಗೆ ಜೈ ಎಂದಿದ್ದಾರೆ. ಜಾಲಹಳ್ಳಿ ವಾರ್ಡ್‌ನ ಕಾಂಗ್ರೆಸ್ ಸದಸ್ಯರಾದ ಜಾನಿ, ಯಶವಂತಪುರ ವಾರ್ಡ್‌ನ ಜಿ.ಕೆ. ವೇಂಕೇಶ್, ಎಚ್.ಎಂ.ಟಿ. ವಾರ್ಡ್‌ನ ಆಶಾ ಸುರೇಶ್, ಲಕ್ಷ್ಮೀದೇವಿನಗರ ವಾರ್ಡ್‌ನ ಕಾಂಗ್ರೆಸ್ ಪಾಲಿಕೆ ಸದಸ್ಯ ವೇಲು ನಾಯ್ಕರ್, ಕೊಟ್ಟಿಗೆಪಾಳ್ಯದ ಕಾಂಗ್ರೆಸ್ ಸದಸ್ಯರಾದ ಮೋಹನ್ ಕುಮಾರ್ ಇಂದು (ಭಾನುವಾರ) ಬಿಜೆಪಿ ಸೇರಿದರು.

ಇಂದು ಮಲ್ಲೇಶ್ವರಂನ ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಕಂದಾಯ ಸಚಿವ ಆರ್.‌ಅಶೋಕ್, ರಾಜ್ಯ ಉಪಾಧ್ಯಕ್ಷ ಅರವಿಂದ ಲಿಂಬಾವಳಿ ಸಮ್ಮುಖದಲ್ಲಿ ಕಾಂಗ್ರೆಸ್ ನಾಯಕರು ಬಿಜೆಪಿ ಸೇರ್ಪಡೆಯಾದರು. ಇದರಿಂದ ಆರ್.ಆರ್.ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರಿಗೆ ಮತ್ತಷ್ಟು ಬಲ ಬಂದಂತಾಗಿದೆ. ತುಮಕೂರು ಜಿಲ್ಲೆಯ ಶಿರಾ ಮತ್ತು ಬೆಂಗಳೂರಿನ ಆರ್.ಆರ್.ನಗರ ಕ್ಷೇತ್ರಗಳಿಗೆ ನ.03ರಂದು ಮತದಾನ ನಡೆಯಲಿದ್ದು, ನ.10ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಸಲು ಅ.16 ಕೊನೆಯ ದಿನವಾಗಿದೆ.

ಇದನ್ನೂ ಓದಿ :  MUST READ: ಪುಲ್ವಾಮ ದಾಳಿಯ ಬಗ್ಗೆ ರವಿ ಬೆಳಗೆರೆ ರವರ ವಿಶ್ಲೇಷಣೆ ಓದಿದ್ದೀರಾ?! ; ಇಲ್ಲಿದೆ ಬೆಳಗೆರೆಯವರ ಆ ದುರ್ಘಟನೆಯ ಸಂಪೂರ್ಣ ವಿಶ್ಲೇಷಣೆ!

ಜಾಹಿರಾತು : ವಾಕ್ ಸಿದ್ಧಿ ಜಪ ಸಿದ್ಧಿ ಯಂತ್ರ ಸಿದ್ಧಿ ಹಾಗೂ ಮಂತ್ರ ಸಿದ್ಧಿಯಲ್ಲಿ ಪರಿಣಿತಿ ಹೊಂದಿರುವ ಪಂಡಿತ್ ಶ್ರೀ ರಾಘವೇಂದ್ರ ಶರ್ಮಾ (ಕಟೀಲು) ಇವರು ವಶೀಕರಣ ಮಹಾ ಮಾಂತ್ರಿಕರು ಹಾಗೂ ಸರ್ವಸಿದ್ಧಿ ಸಾಧಕರಾದ ಇವರು ನಿಮ್ಮ ಧೀರ್ಘ ಕಾಲದ ಸಮಸ್ಯೆಗಳಿಗೆ ಮೂರೂ ದಿನದಲ್ಲಿ ಶಾಶ್ವತ ಪರಿಹಾರ ನೀಡುತ್ತಾರೆ. ಪ್ರೀತಿ ಪ್ರೇಮದ ಸಮಸ್ಯೆಗಳು ಅಥವ ಒಳ್ಳೆಯ ಸರ್ಕಾರೀ ಕೆಲಸ ಸಿಗಲು ಅಥವ ಹಣಕಾಸಿನ ಸಮಸ್ಯೆಗಳು ಅಥವ ಸ್ತ್ರೀ ವಶೀಕರಣ ಹಾಗೂ ಪುರುಷ ವಶೀಕರಣ ಆಗಲು ಇನ್ನು ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ಕೆಳಗೆ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ 9740202800 ವಿಳಾಸ : ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು.9740202800