28 ವರ್ಷಗಳಿಂದ ತನ್ನ ಮಗನನ್ನು ಕೋಣೆಯೊಂದರಲ್ಲಿ ಕೂಡಿಹಾಕಿದ ತಾಯಿ! ; ಇಲ್ಲಿದೆ ಭಯಾನಕ ಕಾರಣ!ಸ್ವೀಡನ್: ಮಹಿಳೆಯೊಬ್ಬಳು ಕಳೆದ 28 ವರ್ಷಗಳಿಂದ ತನ್ನ ಮಗನನ್ನು ಕೋಣೆಯೊಂದರಲ್ಲಿ ಕೂಡಿಹಾಕಿದ ಘಟನೆ ಸ್ಟಾಕ್ ಹೋಮ್ ನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಪೊಲೀಸರ ಪ್ರಾಥಮಿಕ ತನಿಖೆಯ ವೇಳೆ ಈ ಮಾಹಿತಿ ಬಹಿರಂಗವಾಗಿದ್ದು, ಈ ಮಹಿಳೆ ತನ್ನ ಮಗ 13 ವರ್ಷವಿದ್ದಾಗಲೇ ಮನೆಯಲ್ಲಿ ಕೂಡಿ ಹಾಕಿದ್ದಳು ಎಂದು ತಿಳಿದುಬಂದಿದೆ. ಇದೀಗ ಮಹಿಳೆಗೆ 71 ವರ್ಷ ಮತ್ತು ಆಕೆಯ ಮಗನಿಗೆ 41 ವರ್ಷವಾಗಿದ್ದು, ಸಂಬಂಧಿಕರೊಬ್ಬರು ಈ ವಿಚಾರವನ್ನು ತಿಳಿದು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಆರೋಪಿ ಮಹಿಳೆ, ಮಗನಿಗೆ ದೇಹದ ಹಲವೆಡೆ ಗಾಯಗಳಾಗಿದ್ದರಿಂದ, ಕೋಣೆಯೊಂದರಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು ಎಂದು ಸಮಾಜಾಯಿಸಿ ನೀಡಿದ್ದಾಳೆ.

ಆದರೇ ಸಂಬಂಧಿಯೊಬ್ಬರು ಆರೋಪಿಯ ಮನೆಗೆ ಭೇಟಿ ನೀಡಿದ್ದ ವೇಳೆ ಈ ವಿಚಾರ ಮುನ್ನೆಲೆಗೆ ಬಂದಿದ್ದು, ಕೋಣೆಯೊಂದರಿಂದ ಅಸಹ್ಯ ವಾಸನೆ ಬರುತ್ತಿದ್ದರಿಂದ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ನರಳುತ್ತಿದ್ದ ವ್ಯಕ್ತಿಯೊಬ್ಬ ಕಂಡುಬಂದಿದ್ದು ಆತನಿಗೆ ಹಲ್ಲುಗಳಿರಲಿಲ್ಲ. ಮಾತ್ರವಲ್ಲದೆ ಮಾತನಾಡಲು ಕೂಡ ಸಾಧ್ಯವಾಗುತ್ತಿರಲಿಲ್ಲ ಎಂದು ತಿಳಿಸಿದ್ದಾರೆ. ಕೂಡಲೇ ಅಧಿಕಾರಿಗಳಿಗೆ ಮಾಹಿತಿ ನೀಡಿ, ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಆರೋಪಿ ಮಹಿಳೆ ಮಾನಸಿಕ ಅಸ್ವಸ್ಥೆಯೆಂದು ತಿಳಿದುಬಂದಿದ್ದು, ಇದೀಗ ಸ್ಟಾಕ್ ಹೋಮ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.


ಜಾಹಿರಾತು: ನಿಮ್ಮ ಏನೇ ಸಮಸ್ಯೆ ಇದ್ದರೂ ಕೂಡಲೇ ಈ ಕೆಳಕಂಡ ಸಂಖ್ಯೆಗೆ ಕರೆ ಮಾಡಿ!

ಪಂಡಿತ್ ದಾಮೋದರ್ ಭಟ್
ದಕ್ಷಿಣ ಕರ್ನಾಟಕದ ಖ್ಯಾತ
ಜ್ಯೋತಿಷ್ಯರು ಮತ್ತು ಆಧ್ಯಾತ್ಮಿಕ ಚಿಂತಕರು
ನಿಮ್ಮ ಕುಟುಂಬದ ಯಾವುದೇ ಸಮಸ್ಯೆ ಹೇಳಿಕೊಳ್ಳಬಹುದಾದ
ಅಥವಾ ಅಲ್ಲದ, ವಿದ್ಯಾಭ್ಯಾಸ ವ್ಯವಹಾರದ ಕಷ್ಟ,
ಆರ್ಥಿಕ ಸಂಕಷ್ಟಕ್ಕೆ ಮೂಲಕಾರಣ ಮತ್ತು ಅದಕ್ಕೆ ಸೂಕ್ತ ಪರಿಹಾರ ಶತಸಿದ್ಧ!

ಈಗಲೇ ಕರೆಮಾಡಿ : 9008611444


ಜಾಹಿರಾತು: ವೆರಿಕೋಸ್ ವೇಯ್ನ್ ನಿಂದ ಬಳಲುತ್ತಿದ್ದೀರಾ? ಚಿಂತೆ ಬಿಡಿ ವೆರಿಕೋಸ್ ವೇಯ್ನ್ ಗೆ ಆಪರೇಷನ್ ಇಲ್ಲದೆಯೇ ಚಿಕಿತ್ಸೆ ನೀಡುತ್ತಾರೆ ಖ್ಯಾತ ವೈದ್ಯ ಡಾ. ಉರಾಳ್. ಹೆಚ್ಚಿನ ಮಾಹಿತಿಗಾಗಿ ಈಗಲೇ ಸಂಪರ್ಕಿಸಿ ವೆರಿಕೋಸ್ ವೇಯ್ನ್ ರೋಗಿಗಳ ಆಶಾಕಿರಣ ಆಪರೇಷನ್ ರಹಿತ ಆಯುರ್ವೇದ ಪರಿಹಾರ. ಡಾ. ಉರಾಳ್ ವೆರಿಕೋಸ್ ವೇಯ್ನ್ ಆಯುರ್ವೇದ ಕ್ಯೂರ್ ಸಂಸ್ಥೆ ಶೃಂಗೇರಿ. +91 81053 71042 , 8310191364.
http://www.uralsayurveda.in https://www.facebook.com/DrUrals/