MUST READ: ದೀದಿಗೆ ಖಡಕ್ ವಾರ್ನಿಂಗ್ ನೀಡಿದ ರಾಜ್ಯ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್!ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಬೆಂಬಲಿಗರು ತಮ್ಮ ಕಾರ್ಯವಿಧಾನವನ್ನು ಬದಲಾಯಿಸಿಕೊಳ್ಳದಿದ್ದರೆ, ಅವರ ಕೈಕಾಲು ಮುರಿದು, ಕೊಲೆ ಮಾಡುವುದಾಗಿ ರಾಜ್ಯ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ರವಿವಾರ ರ್ಯಾಲಿಯೊಂದರಲ್ಲಿ ಬೆದರಿಕೆ ಹಾಕಿರುವುದು ರಾಜಕೀಯದಲ್ಲಿ ವಿವಾದದ ಬಿರುಗಾಳಿ ಎಬ್ಬಿಸಿದೆ. “ದೀದಿ ಸಹೋದರರು ಮುಂದಿನ ಆರು ತಿಂಗಳಲ್ಲಿ ತೊಂದರೆ ಸೃಷ್ಟಿಸುವ ತಮ್ಮ ನಡವಳಿಕೆಯನ್ನು ಬದಲಿಸಿಕೊಳ್ಳಬೇಕು. ಇಲ್ಲದಿದ್ದರೆ ನಿಮ್ಮ ಕೈಕಾಲು ಮುರಿಯುತ್ತೇವೆ. ನೀವು ಆಸ್ಪತ್ರೆಗೆ ಹೋಗಬೇಕಾಗುತ್ತದೆ. ನೀವು ಇನ್ನೂ ಹೆಚ್ಚಿನದು ಮಾಡಿದರೆ, ಸ್ಮಶಾನ ಸೇರಬೇಕಾಗುತ್ತದೆ” ಎಂದು ಹಲ್ದಿಯಾದಲ್ಲಿ ನಡೆದ ರ್ಯಾಲಿಯಲ್ಲಿ ದಿಲೀಪ್ ಘೋಷ್ ಹೇಳಿದ್ದಾರೆ. ಮುಂದಿನ ವರ್ಷ ವಿಧಾನಸಭಾ ಚುನಾವಣೆ ನಡೆಯುವ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್‌ನ ಭದ್ರ ಕೋಟೆಗೆ ಲಗ್ಗೆ ಹಾಕುವ ಪ್ರಯತ್ನವನ್ನು ಬಿಜೆಪಿ ನಡೆಸುತ್ತಿದೆ.

ರಾಜ್ಯದಲ್ಲಿ ಈಗಾಗಲೇ ಉಭಯ ಪಕ್ಷಗಳ ಬೆಂಬಲಿಗರ ನಡುವೆ ಪರಸ್ಪರ ದಾಳಿಗಳು ನಡೆಯುತ್ತಿದ್ದು, ರಾಜಕೀಯ ಹಿಂಸಾಚಾರಕ್ಕೆ ರಾಜ್ಯ ಸಾಕ್ಷಿಯಾಗಿದೆ. ಗೃಹ ಸಚಿವ ಅಮಿತ್ ಶಾ ಬಂಗಾಳಕ್ಕೆ ಭೇಟಿ ನೀಡಿದ ಬೆನ್ನಲ್ಲೇ ದಿಲೀಪ್ ಘೋಷ್ ಅವರ ಈ ವಿವಾದಾತ್ಮಕ ಹೇಳಿಕೆ ಹೊರಬಿದ್ದಿರುವುದು ಅಚ್ಚರಿಗೆ ಕಾರಣವಾಗಿದೆ. ಪಶ್ಚಿಮ ಬಂಗಾಳದ 294 ಸ್ಥಾನಗಳ ಪೈಕಿ 200ನ್ನು ಗೆಲ್ಲುವ ಮಹತ್ವಾಕಾಂಕ್ಷಿ ಗುರಿಯನ್ನು ಅಮಿತ್ ಶಾ ತಮ್ಮ ಪಕ್ಷಕ್ಕೆ ನೀಡಿದ್ದಾರೆ. ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಜತೆ ಚರ್ಚೆಗಾಗಿ ಬಿಜೆಪಿ ಮುಖಂಡರು ಸೋಮವಾರ ದೆಹಲಿಗೆ ಪ್ರಯಾಣಿಸಲಿದ್ದಾರೆ.

ಓಂ ಶ್ರೀ ಆದಿಶಕ್ತಿ ಚೌಡೇಶ್ವರಿ ಜ್ಯೋತಿಷ್ಯ ಪೀಠಂ. ನಿಮ್ಮ ಸಮಸ್ಯೆ ಏನೇ ಇರಲಿ ಕೇರಳ ಮತ್ತು ದಕ್ಷಿಣ ಕನ್ನಡದ 108 ಜ್ಯೋತಿಷ್ಯ ತಂತ್ರಗಳಿಂದ ನಿಮ್ಮ ನಿಗೂಢ ಗುಪ್ತ ಸಮಸ್ಯೆಗಳಿಗೆ, ತಾಂಬೂಲ ಪ್ರಶ್ನೆ ಮತ್ತು ಆರೂಢ ಪ್ರಶ್ನೆಯಿಂದ ಕೇವಲ 21 ಗಂಟೆಯಲ್ಲಿ ಶಾಶ್ವತ ಪರಿಹಾರ. ಖ್ಯಾತ ಜ್ಯೋತಿಷಿ, ಪಂಡಿತ್ ಶ್ರೀ ಶ್ರೀನಿವಾಸಮೂರ್ತಿ. ಇನ್ನು ನಿಮ್ಮ ಜೀವನದಲ್ಲಿ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ಕೇರಳದ 18 ದೈವಿಕ ಪೂಜಾ ಶಕ್ತಿಗಳಿಂದ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮಲ್ಲಿ ಸಮಸ್ಯೆಗಳಾದ ಮಾಟ ಮಂತ್ರ ನಿವಾರಣೆ, ಕೋರ್ಟ್ ವಿಚಾರ, ಆಸ್ತಿ ವಿಚಾರ, ಹಣಕಾಸಿನ ಸಮಸ್ಯೆ, ಸತಿಪತಿ ಕಲಹ, ಅತ್ತೆ-ಸೊಸೆ ಕಲಹ, ಮಕ್ಕಳ ವಿದ್ಯಭ್ಯಾಸದಲ್ಲಿ ತೊಂದರೆ, ಪ್ರೇಮ ಸಂಬಂಧದಂತ ಯಾವುದೇ ಸಮಸ್ಯೆಗಳಿಗೆ ಇಂದೇ ಕರೆ ಮಾಡಿ. 9108678938