ಗುಟ್ಟು ಬಿಚ್ಚಿಟ್ಟ ಹಳ್ಳಿಹಕ್ಕಿನನ್ನಂತ ಹುಚ್ಚನ ತ್ಯಾಗದಿಂದ ಬಿಡಿಎ ಅಧ್ಯಕ್ಷನಾಗಿ ಎಸ್.ಆರ್.ವಿಶ್ವನಾಥ್ ದೋಚುತ್ತಿದ್ದಾನೆ. ಕೊರೊನಾ ಮೊದಲ ಅಲೆಯಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಹಾಕಿದ ಹಾಕಿದ 10 ಸಾವಿರ ಬೆಡ್ ಫ್ಯಾನ್ ಎಲ್ಲಾ ಏನಾಯ್ತು ವಿಶ್ವನಾಥ್ ಎಂದು ಪ್ರಶ್ನಿಸಿದ್ದಾರೆ.

ನೀರಾವರಿ ಯೋಜನೆಯಲ್ಲಿ ಭ್ರಷ್ಟಾಚಾರವಾಗಿದೆ. 20 ಸಾವಿರ ಕೋಟಿಯ ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ಭ್ರಷ್ಟಾಚಾರ ಮಾಡಿದ್ದಾರೆ. ಹಣಕಾಸು ಇಲಾಖೆ ಹಾಗೂ ಯಾವುದೇ ಬೋರ್ಡ್ ಕ್ಲಿಯರೆನ್ಸ್ ಇಲ್ಲ ಎಂದು ಆಕ್ರೋಶ ಹೊರಹಾಕಿದ್ದರು. 

ವಿಜಯೇಂದ್ರ ಭ್ರಷ್ಟಾಚಾರದ ಬಗ್ಗೆ ಎಲ್ಲಾ ಸಚಿವರು ಮಾತನಾಡುತ್ತಿದ್ದಾರೆ. ಯಾವ ಸಚಿವರು ಸಮಾಧಾನದಿಂದ ಇದ್ದಾರೆ ಹೇಳಿ? ಯಡಿಯೂರಪ್ಪ ಮಕ್ಕಳಿಂದ ಮೊದಲು ಜೈಲಿಗೆ ಹೋಗಿದ್ದರು ಎರಡನೇ ಬಾರಿಗೆ ಹೀಗಾಗ ಬಾರದು ಅನ್ನೋದು ನಮ್ಮ ಆಶಯ. ಯಡಿಯೂರಪ್ಪನವರದು ಇ.ಡಿಯಲ್ಲಿ ಕೇಸಿಲ್ವಾ ಎಂದು ಪ್ರಶ್ನಿಸಿದ್ದಾರೆ.

ಇದೀಗ ವೀರಶೈವ ಸಮುದಾಯದ ಮುಖ್ಯಮಂತ್ರಿ ನಿರ್ಗಮಿಸುತ್ತಿರುವುದರಿಂದ ಮತ್ತೆ ಅದೇ ಸಮುದಾಯಕ್ಕೆ ಮುಖ್ಯಮಂತ್ರಿ ಸ್ಥಾನ ನೀಡುವುದು ಸೂಕ್ತ. ಅದರಲ್ಲೂ ಉತ್ತರ ಕರ್ನಾಟಕದವರಿಗೇ ನೀಡಬೇಕು. ಬಸವರಾಜ್ ಬೊಮ್ಮಾಯಿ, ಬಸನಗೌಡ ಪಾಟೀಲ್ ಯತ್ನಾಳ್, ಮುರುಗೇಶ್ ನಿರಾಣಿ ಇಲ್ಲವೇ ವೀರಶೈವರಲ್ಲಿ ಯಾವದೇ ನಾಯಕರಿಗೆ ಸಿಎಂ ಸ್ಥಾನ ಕೊಟ್ಟರೂ ಸರಿಯಾಗುತ್ತದೆ ಎಂದರು.

ಇದು ಯಡಿಯೂರಪ್ಪನವರು ತೆಗೆದುಕೊಂಡಿರುವ ತೀರ್ಮಾನ, ರಾಜೀನಾಮೆ ಕುರಿತು ಸಿ.ಪಿ.ಯೋಗೇಶ್ವರ್ ಇಲ್ಲವೇ ಇನ್ನೊಬ್ಬರಾಗಲಿ ಕೇವಲ ಕಾಕತಾಳೀಯ ಮಾತ್ರ. ಇದು ಯಡಿಯೂರಪ್ಪನವರ ನಿರ್ಧಾರವೇ ಆಗಿದೆ. ಯೋಗೇಶ್ವರ್ ಸೇರಿದಂತೆ ಇನ್ಯಾರಿಗೇ ಆಗಲಿ ಯಡಿಯೂರಪ್ಪನವರನ್ನು ತೆಗೆಯುವ ಶಕ್ತಿ ಇಲ್ಲವೇ ಇಲ್ಲ ಎಂದು ಹೇಳಿದರು.

ಅನಿರೀಕ್ಷಿತವೇನಲ್ಲ, ನಿರೀಕ್ಷಿತ:
ಬಿ.ಎಸ್.ಯಡಿಯೂರಪ್ಪನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವರ ಕುರಿತು ಹೇಳಿಕೆ ನೀಡಿರುವುದು ಅನಿರೀಕ್ಷಿತವೇನಲ್ಲ, ನಿರೀಕ್ಷಿತವೇ. ಹೈ ಕಮಾಂಡ್ ಸೂಚನೆ ನೀಡಿದರೆ ನಾನು ಪದತ್ಯಾಗ ಮಾಡಲು ಸಿದ್ಧನಿದ್ದೇನೆ ಎಂದು ಹೇಳಿರುವುದು ನಿಜ. ಬಿಜೆಪಿ ಹೈಕಮಾಂಡ್ ಆಧಾರಿತ ಪಕ್ಷ, ಅವರ ಮಾತುಗಳೇ ನಡೆಯುವುದು. ದೆಹಲಿ ಹೈಕಮಾಂಡ್ ಹೇಳಿದ್ದನ್ನು ನಾವು ಕೇಳಲೇಬೇಕು. ಇಂದಿನ ಪರಿಸ್ಥಿತಿಯಲ್ಲಿ ಬಿ.ಎಸ್.ಯಡಿಯೂರಪ್ಪನವರು ತೆಗೆದುಕೊಂಡಿರುವ ನಿರ್ಧಾರ ತುಂಬಾ ಸಮಂಜಸವಾಗಿದೆ. ಕೊರೊನಾ ಅಟ್ಟಹಾಸ, ಆರ್ಥಿಕ ಸಂಕಷ್ಟ, ಅತಿವೃಷ್ಟಿ ಸೇರಿದಂತೆ ನೂರಾರು ಸಂಕಷ್ಟಗಳು ಎದುರಾಗಿವೆ. ಇದೆಲ್ಲದರ ನಡುವೆ ಯಡಿಯೂರಪ್ಪನವರು ಯೋಚಿಸಿರುವುದು ಸರಿ ಇದೆ. ರಾಜ್ಯದ ಶಕ್ತಿ ಪೀಠ ಯಾಕೋ ಮುಸುಕಾಗುತ್ತಿದೆ ಎಂದು ನಾನು ಈ ಹಿಂದೆಯೇ ಹೇಳಿದ್ದೆ.