ಗುಟ್ಟು ಬಿಚ್ಚಿಟ್ಟ ಹಳ್ಳಿಹಕ್ಕಿ: ವಿಶ್ವನಾಥ್ಹೈಕಮಾಂಡ್ ಸೂಚಿಸಿದರೆ ಪದತ್ಯಾಗ ಮಾಡಲು ಸಿದ್ಧ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿರುವುದು ಸರಿ ಇದೆ. ಆದರೆ ಯಡಿಯೂರಪ್ಪನವರ ಬಳಿಕ ಉತ್ತರ ಕರ್ನಾಟಕದ ವೀರಶೈವ ನಾಯಕರೇ ಮುಖ್ಯಮಂತ್ರಿಯಾದರೆ ಸೂಕ್ತ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ತಿಳಿಸಿದ್ದಾರೆ.

ಇದೀಗ ವೀರಶೈವ ಸಮುದಾಯದ ಮುಖ್ಯಮಂತ್ರಿ ನಿರ್ಗಮಿಸುತ್ತಿರುವುದರಿಂದ ಮತ್ತೆ ಅದೇ ಸಮುದಾಯಕ್ಕೆ ಮುಖ್ಯಮಂತ್ರಿ ಸ್ಥಾನ ನೀಡುವುದು ಸೂಕ್ತ. ಅದರಲ್ಲೂ ಉತ್ತರ ಕರ್ನಾಟಕದವರಿಗೇ ನೀಡಬೇಕು. ಬಸವರಾಜ್ ಬೊಮ್ಮಾಯಿ, ಬಸನಗೌಡ ಪಾಟೀಲ್ ಯತ್ನಾಳ್, ಮುರುಗೇಶ್ ನಿರಾಣಿ ಇಲ್ಲವೇ ವೀರಶೈವರಲ್ಲಿ ಯಾವದೇ ನಾಯಕರಿಗೆ ಸಿಎಂ ಸ್ಥಾನ ಕೊಟ್ಟರೂ ಸರಿಯಾಗುತ್ತದೆ ಎಂದರು.

ಇದು ಯಡಿಯೂರಪ್ಪನವರು ತೆಗೆದುಕೊಂಡಿರುವ ತೀರ್ಮಾನ, ರಾಜೀನಾಮೆ ಕುರಿತು ಸಿ.ಪಿ.ಯೋಗೇಶ್ವರ್ ಇಲ್ಲವೇ ಇನ್ನೊಬ್ಬರಾಗಲಿ ಕೇವಲ ಕಾಕತಾಳೀಯ ಮಾತ್ರ. ಇದು ಯಡಿಯೂರಪ್ಪನವರ ನಿರ್ಧಾರವೇ ಆಗಿದೆ. ಯೋಗೇಶ್ವರ್ ಸೇರಿದಂತೆ ಇನ್ಯಾರಿಗೇ ಆಗಲಿ ಯಡಿಯೂರಪ್ಪನವರನ್ನು ತೆಗೆಯುವ ಶಕ್ತಿ ಇಲ್ಲವೇ ಇಲ್ಲ ಎಂದು ಹೇಳಿದರು.

ಇದನ್ನೂ ಓದಿ :  ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ-ಎಸ್‍ಐಟಿಗೆ ಮುಖ್ಯಸ್ಥರೇ ಇಲ್ವಾ?

ಅನಿರೀಕ್ಷಿತವೇನಲ್ಲ, ನಿರೀಕ್ಷಿತ:
ಬಿ.ಎಸ್.ಯಡಿಯೂರಪ್ಪನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವರ ಕುರಿತು ಹೇಳಿಕೆ ನೀಡಿರುವುದು ಅನಿರೀಕ್ಷಿತವೇನಲ್ಲ, ನಿರೀಕ್ಷಿತವೇ. ಹೈ ಕಮಾಂಡ್ ಸೂಚನೆ ನೀಡಿದರೆ ನಾನು ಪದತ್ಯಾಗ ಮಾಡಲು ಸಿದ್ಧನಿದ್ದೇನೆ ಎಂದು ಹೇಳಿರುವುದು ನಿಜ. ಬಿಜೆಪಿ ಹೈಕಮಾಂಡ್ ಆಧಾರಿತ ಪಕ್ಷ, ಅವರ ಮಾತುಗಳೇ ನಡೆಯುವುದು. ದೆಹಲಿ ಹೈಕಮಾಂಡ್ ಹೇಳಿದ್ದನ್ನು ನಾವು ಕೇಳಲೇಬೇಕು. ಇಂದಿನ ಪರಿಸ್ಥಿತಿಯಲ್ಲಿ ಬಿ.ಎಸ್.ಯಡಿಯೂರಪ್ಪನವರು ತೆಗೆದುಕೊಂಡಿರುವ ನಿರ್ಧಾರ ತುಂಬಾ ಸಮಂಜಸವಾಗಿದೆ. ಕೊರೊನಾ ಅಟ್ಟಹಾಸ, ಆರ್ಥಿಕ ಸಂಕಷ್ಟ, ಅತಿವೃಷ್ಟಿ ಸೇರಿದಂತೆ ನೂರಾರು ಸಂಕಷ್ಟಗಳು ಎದುರಾಗಿವೆ. ಇದೆಲ್ಲದರ ನಡುವೆ ಯಡಿಯೂರಪ್ಪನವರು ಯೋಚಿಸಿರುವುದು ಸರಿ ಇದೆ. ರಾಜ್ಯದ ಶಕ್ತಿ ಪೀಠ ಯಾಕೋ ಮುಸುಕಾಗುತ್ತಿದೆ ಎಂದು ನಾನು ಈ ಹಿಂದೆಯೇ ಹೇಳಿದ್ದೆ.