ಹನುಮದ್ ಜನ್ಮಭೂಮಿ ಕಿಷ್ಕಿಂದೆಯಲ್ಲಿ ತಲೆ ಎತ್ತಲಿದೆ ವಿಶ್ವದ ಅತೀ ದೊಡ್ಡ ಹನುಮಾನ್ ಪ್ರತಿಮೆ‌!ಬೆಂಗಳೂರು: ರಾಮನ ಭಕ್ತ ಹನುಮನ ಹುಟ್ಟೂರು ಬಳ್ಳಾರಿ ಜಿಲ್ಲೆಯ ಹಂಪಿಯ ಹೊರವಲಯದಲ್ಲಿ ವಿಶ್ವದ ಅತಿ ಎತ್ತರದ ಹನುಮಂತನ ಪ್ರತಿಮೆ ತಲೆ ಎತ್ತಲಿದೆ. ಕಿಷ್ಕಿಂಧೆಯಲ್ಲಿ ವಿಶ್ವದ ಅತೀ ಎತ್ತರದ ಹನುಮಂತನ ಪ್ರತಿಮೆಯನ್ನು ಶೀಘ್ರವೇ ನಿರ್ಮಿಸಲಾಗುವುದು ಎಂದು ಹನುಮದ್ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಅಧ್ಯಕ್ಷರಾದ ಸ್ವಾಮಿ ಗೋವಿಂದ ಆನಂದ ಸರಸ್ವತಿ ಸ್ವಾಮೀಜಿ ತಿಳಿಸಿದ್ದಾರೆ. ಅಯೋಧ್ಯೆಯ ರಾಮಜನ್ಮಭೂಮಿ ಮಂದಿರದ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಅವರನ್ನು ಭೇಟಿಯಾದ ಬಳಿಕ ಇದನ್ನು ಬಹಿರಂಗಪಡಿಸಿದ್ದಾರೆ. ಕರ್ನಾಟಕದ ಬಳ್ಳಾರಿಯಲ್ಲಿರುವ ಪಂಪಾಪುರದಲ್ಲಿ 215 ಮೀಟರ್ ಎತ್ತರದ ಹನುಮನ ವಿಗ್ರಹ ನಿರ್ಮಿಸುವ ಯೋಜನೆ ಇದಾಗಿದೆ. ಇದಕ್ಕೆ ಅಂದಾಜು 1,200 ಕೋಟಿ ವೆಚ್ಚವಾಗಲಿದೆ. ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಈ ಕುರಿತು ಮಾತನಾಡಿದ ಅವರು, 215 ಮೀಟರ್ ಎತ್ತರದ ಪ್ರತಿಮೆಯನ್ನು ನಿರ್ಮಿಸಲು ಯೋಜನೆ ರೂಪಿಸಲಾಗಿದ್ದು, 1,200 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. ಇದು ವಿಶ್ವದಲ್ಲೇ ಅತ್ಯಂತ ಎತ್ತರದ ಹನುಮಂತನ ಪ್ರತಿಮೆಯಾಗಲಿದೆ. ಬಳ್ಳಾರಿಯ ಪಂಪಾಪುರ ಕಿಷ್ಕಿಂಧೆಯಲ್ಲಿ ನಿರ್ಮಿಸಲಾಗುತ್ತಿದೆ. ರಾಷ್ಟ್ರಾದ್ಯಂತ ರಥಯಾತ್ರೆ ಮಾಡುವ ಮೂಲಕ ಪ್ರತಿಮೆ ನಿರ್ಮಾಣಕ್ಕೆ ಹಣ ಸಂಗ್ರಹಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಹಂಪಿಯ ಪಂಪಾಪುರವು ರಾಮಾಯಣದಲ್ಲಿ ಬರುವ ಕಿಷ್ಕಿಂಧೆ ಸ್ಥಳ ಎಂದು ನಂಬಲಾಗಿದೆ. ಹನುಮಂತ ಇದೇ ಕಿಷ್ಕಿಂಧೆಯಲ್ಲಿ ಜನಿಸಿದ್ದು ಎಂದು ವಾಲ್ಮೀಕಿ ರಾಮಾಯಣದಲ್ಲಿ ಹೇಳಲಾಗಿದೆ. ಹನುಮಂತನ ವಿಗ್ರಹ ಸ್ಥಾಪನೆಗೆ ಹಣ ಸಂಗ್ರಹಿಸಲು ಹನುಮದ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸಂಸ್ಥೆಯು ರಾಷ್ಟ್ರವ್ಯಾಪಿ ರಥಯಾತ್ರೆ ನಡೆಸಲಿದೆ ಎಂದು ಟ್ರಸ್ಟ್ ಅಧ್ಯಕ್ಷ ಸ್ವಾಮಿ ಗೋವಿಂದ್ ಆನಂದ್ ಸರಸ್ವತಿ ತಿಳಿಸಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆದರೆ ಇನ್ನು 6 ವರ್ಷದಲ್ಲಿ ಹಂಪಿಯ ಹಂಪಾಪುರದಲ್ಲಿ ವಿಶ್ವದ ಅತಿ ಎತ್ತರದ ಆಂಜನೇಯನ ಮೂರ್ತಿ ನಿರ್ಮಾಣವಾಗಲಿದೆ. ಇದೇ ವೇಳೆ, ಅಯೋಧ್ಯೆಯಲ್ಲಿ ಶ್ರೀರಾಮನ ಬೃಹತ್ ಪ್ರತಿಮೆ ನಿರ್ಮಿಸಲಾಗುತ್ತಿದೆ. ಇದು 221 ಮೀಟರ್ ಎತ್ತರದಲ್ಲಿದ್ದು, ವಿಶ್ವದ ಅತಿ ಎತ್ತರದ ರಾಮನ ಪ್ರತಿಮೆ ಆಗಿರಲಿದೆ. ಹನುಮಂತನ ಪ್ರತಿಮೆ ರಾಮನದ್ದಕ್ಕಿಂತ ದೊಡ್ಡದಿರುವುದು ಬೇಡವೆಂದು ಹಂಪಿಯಲ್ಲಿ ತುಸು ಕಡಿಮೆ ಎತ್ತರದ ಹನುಮಂತನ ಪ್ರತಿಮೆ ನಿರ್ಮಿಸಲು ಯೋಜಿಸಲಾಗಿದೆ. ಇದೇ ವೇಳೆ ರಾಮಜನ್ಮಭೂಮಿಯಲ್ಲಿ ರಥ ನಿರ್ಮಾಣದ ಕುರಿತು ಮಾತನಾಡಿರುವ ಅವರು, ರಾಮಜನ್ಮ ಭೂಮಿಯಲ್ಲಿ ಸುಮಾರು 2 ಕೋಟಿ ವೆಚ್ಚದಲ್ಲಿ 80 ಅಡಿ ಎತ್ತರದ ರಥ ನಿರ್ಮಾಣ ಮಾಡಲಾಗುತ್ತಿದೆ. ಇನ್ನೆರಡು ವರ್ಷದಲ್ಲಿ ರಥ ನಿರ್ಮಾಣವಾಗಲಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ :  ಮಾಜಿ ಸಿಎಂ ಸಿದ್ದರಾಮಯ್ಯಗೆ ತಲೆ ಸರಿ ಇಲ್ಲ ಎನ್ನುವುದು ಇದಕ್ಕೇ... ಬಿಜೆಪಿ ಮುಖಂಡ!

ಜಾಹಿರಾತು: ವೆರಿಕೋಸ್ ವೇಯ್ನ್ ನಿಂದ ಬಳಲುತ್ತಿದ್ದೀರಾ? ಚಿಂತೆ ಬಿಡಿ ವೆರಿಕೋಸ್ ವೇಯ್ನ್ ಗೆ ಆಪರೇಷನ್ ಇಲ್ಲದೆಯೇ ಚಿಕಿತ್ಸೆ ನೀಡುತ್ತಾರೆ ಖ್ಯಾತ ವೈದ್ಯ ಡಾ. ಉರಾಳ್. ಹೆಚ್ಚಿನ ಮಾಹಿತಿಗಾಗಿ ಈಗಲೇ ಸಂಪರ್ಕಿಸಿ ವೆರಿಕೋಸ್ ವೇಯ್ನ್ ರೋಗಿಗಳ ಆಶಾಕಿರಣ ಆಪರೇಷನ್ ರಹಿತ ಆಯುರ್ವೇದ ಪರಿಹಾರ. ಡಾ. ಉರಾಳ್ ವೆರಿಕೋಸ್ ವೇಯ್ನ್ ಆಯುರ್ವೇದ ಕ್ಯೂರ್ ಸಂಸ್ಥೆ ಶೃಂಗೇರಿ. +91 81053 71042 , 8310191364.
http://www.uralsayurveda.in https://www.facebook.com/DrUrals/