ಸ್ವಿಸ್ ಬ್ಯಾಂಕ್‍ನಲ್ಲಿ ಭಾರತೀಯರು ಎಷ್ಟು ಹಣ ಇಟ್ಟಿದ್ದಾರೆ ಗೊತ್ತಾ?ಭಾರತೀಯರು ವೈಯಕ್ತಿಕವಾಗಿ ಮತ್ತು ಬೇರೆ ಬೇರೆ ಹಣಕಾಸು ಸಂಸ್ಥೆಗಳ ಮೂಲಕ ಸ್ವಿಸ್ ಬ್ಯಾಂಕ್ ಗಳನ್ನು ಇಟ್ಟಿರುವ ಹಣದ ಮೊತ್ತ 20,700 ಕೋಟಿ ರೂ.ಗೆ ಜಿಗಿದಿದೆ.13 ವರ್ಷಗಳಲ್ಲೇ ಇದು ಗರಿಷ್ಠ ಮೊತ್ತವಾಗಿದ್ದರೂ ವೈಯಕ್ತಿಕ ಹಣ ಠೇವಣಿಯಲ್ಲಿ ಇಳಿಕೆಯಾಗಿದೆ ಎಂದು ಸ್ವಿಜರ್ಲೆಂಡ್ ಕೇಂದ್ರೀಯ ಬ್ಯಾಂಕ್ ಹೇಳಿದೆ.

ಬ್ಯಾಂಕ್ 2020ರ ವಾರ್ಷಿಕ ವರದಿಯಲ್ಲಿ ಮಾಹಿತಿ ನೀಡಿದ್ದು, ಸೆಕ್ಯೂರೀಟಿಸ್ ಮತ್ತು ಅದೇ ರೀತಿಯ ಇತರ ಮಾದರಿಯ ಹೂಡಿಕೆಯಿಂದಾಗಿ ಮೊತ್ತ ಏರಿಕೆಯಾಗಿದೆ. ಭಾರತದಲ್ಲಿನ ಸ್ವಿಜರ್ಲೆಂಡ್ ಬ್ಯಾಂಕಿನಲ್ಲಿರುವ ಹಣವು ಇದರಲ್ಲಿ ಸೇರಿದೆ ಎಂದು ತಿಳಿಸಿದೆ. ಈ ಹಣದಲ್ಲಿ ಭಾರತೀಯರು, ಅನಿವಾಸಿ ಭಾರತೀಯರು ಬೇರೆ ದೇಶಗಳ ಸಂಸ್ಥೆಗಳ ಹೆಸರಿನಲ್ಲಿ ಇಡಲಾಗಿರುವ ಹಣವನ್ನು ಸೇರಿಸಿಲ್ಲ.

2006ರಲ್ಲಿ ಸ್ವಿಸ್ ಬ್ಯಾಂಕ್‍ಗಳಲ್ಲಿ ಒಟ್ಟು 23,000 ಕೋಟಿ ರೂ. ಹಣವನ್ನು ಇಡಲಾಗಿತ್ತು. ಇದು ಇಲ್ಲಿಯವರೆಗೆ ಭಾರತೀಯರು ಇರಿಸಿದ್ದ ಗರಿಷ್ಠ ಮೊತ್ತವಾಗಿತ್ತು. 2010, 2013, 2017 ಹೊರತು ಪಡಿಸಿ ನಂತರದ ವರ್ಷಗಳಲ್ಲಿ ಠೇವಣಿ ಇಳಿಕೆಯಾಗಿತ್ತು. ಆದರೆ 2020ರಲ್ಲಿ ಈ ಮೊತ್ತ 20,700 ಕೋಟಿ ರೂ.ಗೆ ಜಿಗಿದಿದೆ.