ಡಿಕೆ ಶಿವಕುಮಾರ್ ರಿಂದ ಹಿಂದುತ್ವದ ಜಪ ; ಚುನಾವಣಾ ಅಖಾಡದಲ್ಲಿ ಡಿಕೆಶಿಯಿಂದ ‘ಜೈ ಶ್ರೀ ರಾಮ್’ ಘೋಷಣೆ!ಬೆಂಗಳೂರು: ಆರ್ ಆರ್ ನಗರ ಉಪಚುನಾವಣೆ ಪ್ರಚಾರದ ವೇಳೆ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ ಅವರು ಹಿಂದುತ್ವ ಜಪ ಮಾಡಿದ್ದಾರೆ. ಹಿಂದೂ ಜಾಗೃತ ಸೇನೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಕೆ ಶಿವಕುಮಾರ್ ಅವರು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದರು. ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಪರ ಚುನಾವಣಾ ಪ್ರಚಾರ ರ್ಯಾಲಿಗಳನ್ನು ನಡೆಸುತ್ತಿರುವ ಡಿಕೆ ಶಿವಕುಮಾರ್ ಅವರು ಕಳೆದ ರಾತ್ರಿ ಸಂಘಟನೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ್ದರು. ಈ ವೇಳೆ ಕುಸುಮಾರನ್ನು ಮತ ನೀಡಿ ಗೆಲ್ಲಿಸಿ ಎಂದು ಮತದಾರರಲ್ಲಿ ಮನವಿ ಮಾಡಿದರು. ಬಿಜೆಪಿ ಕಾರ್ಯಕರ್ತರ ಮೇಲೆ ಹಾಕಿರುವ ಪ್ರಕರಣಗಳನ್ನು ಇನ್ನೂ ವಾಪಸ್ ತೆಗೆದಿಲ್ಲ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ತುಂಬಿದೆ. ಬಿಜೆಪಿ ನಾಯಕರು. ಮುನಿರತ್ನ ಅವರನ್ನು ಕರೆಯಿಸಿ ಮಾತಾಡಿ ಮುನಿರಾಜುಗೌಡ, ಬಿಜೆಪಿ ಕಾರ್ಯಕರ್ತರ ಮೇಲೆ ಹಾಕಿರುವ ಪ್ರಕರಣ ವಾಪಸ್ ಪಡೆಯಬಹುದಾಗಿತ್ತು. ಆದರೆ ಹಾಗೆ ಮಾಡಿಲ್ಲ ಎಂದರು.

ಪಕ್ಷ ತಾಯಿ ಇದ್ದಂತೆ ಎಂದು ಹೇಳಿದ್ದ ಮುನಿರತ್ನ ಪಕ್ಷಕ್ಕೆ ದ್ರೋಹ ಮಾಡಿದ್ದಾರೆ.ದುಡ್ಡು ತೆಗೆದುಕೊಂಡು ಬಿಜೆಪಿ ಸೇರಿದ್ದಾರೆ ಎಂದು ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದರು. ನಾವು ಯಾವುದೇ ಆಮಿಷಗಳನ್ನು ಒಡ್ಡಿ ಮತ ಕೇಳುತ್ತಿಲ್ಲ. ವಿಶ್ವಾಸದಿಂದ ಕೇಳುತ್ತಿದ್ದೇವೆ. ಆದರೆ ಬಿಜೆಪಿಯವರು ಆರ್.ಆರ್. ನಗರ ಹಾಗೂ ಶಿರಾ ಎರಡೂ ಕ್ಷೇತ್ರಗಳಲ್ಲೂ ಕಂತೆ ಕಂತೆ ಹಣ ಹಂಚುತ್ತಿದ್ದಾರೆ. ಅವರ ಹಣ ಹಂಚಿಕೆ ಬಗ್ಗೆ ನಮಗೆ ದಾಖಲೆಗಳು ಲಭ್ಯವಾಗಿವೆ. ಶಿರಾದಲ್ಲಿ ಮನೆಗಳಿಗೆ ಸ್ಟಿಕ್ಕರ್ ಹಾಕಿ ಹಣ ಹಂಚಿದ್ದಾರೆ ಎಂದು ಆರೋಪಿಸಿದರು. ನಂತರ ಮೈಕ್ ಹಿಡಿದು ಜೈ ಶ್ರೀರಾಮ್, ಜೈ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದರು. ಇದಕ್ಕೆ ಪ್ರತಿಯಾಗಿ ಅಭಿಮಾನಿಗಳು ಸಹ ಧ್ವನಿ ಕೂಗಿಸಿದರು. ಆರ್ ಆರ್ ನಗರ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಮುನಿರತ್ನ, ಕಾಂಗ್ರೆಸ್ ನಿಂದ ಕುಸುಮಾ ಮತ್ತು ಜೆಡಿಎಸ್ ನಿಂದ ಕೃಷ್ಣಮೂರ್ತಿ ರಣ ಕಣದಲ್ಲಿದ್ದಾರೆ.

ಓಂ ಶ್ರೀ ಆದಿಶಕ್ತಿ ಚೌಡೇಶ್ವರಿ ಜ್ಯೋತಿಷ್ಯ ಪೀಠಂ. ನಿಮ್ಮ ಸಮಸ್ಯೆ ಏನೇ ಇರಲಿ ಕೇರಳ ಮತ್ತು ದಕ್ಷಿಣ ಕನ್ನಡದ 108 ಜ್ಯೋತಿಷ್ಯ ತಂತ್ರಗಳಿಂದ ನಿಮ್ಮ ನಿಗೂಢ ಗುಪ್ತ ಸಮಸ್ಯೆಗಳಿಗೆ, ತಾಂಬೂಲ ಪ್ರಶ್ನೆ ಮತ್ತು ಆರೂಢ ಪ್ರಶ್ನೆಯಿಂದ ಕೇವಲ 21 ಗಂಟೆಯಲ್ಲಿ ಶಾಶ್ವತ ಪರಿಹಾರ. ಖ್ಯಾತ ಜ್ಯೋತಿಷಿ, ಪಂಡಿತ್ ಶ್ರೀ ಶ್ರೀನಿವಾಸಮೂರ್ತಿ. ಇನ್ನು ನಿಮ್ಮ ಜೀವನದಲ್ಲಿ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ಕೇರಳದ 18 ದೈವಿಕ ಪೂಜಾ ಶಕ್ತಿಗಳಿಂದ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮಲ್ಲಿ ಸಮಸ್ಯೆಗಳಾದ ಮಾಟ ಮಂತ್ರ ನಿವಾರಣೆ, ಕೋರ್ಟ್ ವಿಚಾರ, ಆಸ್ತಿ ವಿಚಾರ, ಹಣಕಾಸಿನ ಸಮಸ್ಯೆ, ಸತಿಪತಿ ಕಲಹ, ಅತ್ತೆ-ಸೊಸೆ ಕಲಹ, ಮಕ್ಕಳ ವಿದ್ಯಭ್ಯಾಸದಲ್ಲಿ ತೊಂದರೆ, ಪ್ರೇಮ ಸಂಬಂಧದಂತ ಯಾವುದೇ ಸಮಸ್ಯೆಗಳಿಗೆ ಇಂದೇ ಕರೆ ಮಾಡಿ. 9108678938