ದೇವೇಗೌಡ ಯು ಟರ್ನ್ ಆದ್ರಾ?! ; ಏನಿದು ಕುಮಾರಸ್ವಾಮಿ ಮಾತಿನ ಅರ್ಥ?!



ಮೈಸೂರು: ಮೈತ್ರಿ ಸರ್ಕಾರ ಪತನದ ಬಳಿಕ ಶಾಸಕ ಜಿ.ಟಿ.ದೇವೇಗೌಡ ಅವರು ಕುಮಾರಸ್ವಾಮಿ ವಿರುದ್ಧ ಬಹಿರಂಗವಾಗಿ ಮತನಾಡಿದ್ದರು. ಅಲ್ಲದೇ ಶಾಸಕಾಂಗ ಸಭೆ ಸೇರಿದಂತೆ ಪಕ್ಷದ ಕಾರ್ಯಚಟುವಟಿಕೆಗಳಿಂದ ದೂರ ಉಳಿದಿದ್ದಾರೆ. ಇನ್ನು ಒಂದು ಹೆಜ್ಜೆ ಮುಂದೆ ಹೋಗಿ ನೊಡಿದ್ರೆ ಈಗಾಗಲೇ ಜಿ.ಟಿ.ದೇವೇಗೌಡ್ರು ಜೆಡಿಎಸ್‌ನಿಂದ ಒಂದು ಕಾಲು ಬಿಜೆಪಿ ಬಾಗಿಲಲ್ಲಿ ಇಟ್ಟಿದ್ದರು. ಇದು ಕುಮಾರಸ್ವಾಮಿ ಕಣ್ಣು ಕೆಂಪಾಗಿಸಿದ್ದು, ಯಾರನ್ನ ತಡೆ ಹಿಡಿಯಲ್ಲ ಹೋಗಲಿ ಬಿಡಿ ಎಂದು ಬಹಿರಂಗವಾಗಿಯೇ ಜಿಟಿಡೆಗೆ ಹೇಳಿದ್ದರು. ಆದ್ರೆ, ಇದೀಗ ಕುಮಾರಸ್ವಾಮಿ ಅವರ ಮಾತುಗಳನ್ನ ಕೇಳಿದ್ರೆ, ಎಲ್ಲವೂ ಸರಿ ಹೋಗಿವೆ. ಜೆ.ಟಿ.ದೇವೇಗೌಡ ಅವರು ಜೆಡಿಎಸ್‌ನಲ್ಲಿ ಉಳಿದುಕೊಳ್ಳುವ ಸಾಧ್ಯತೆಗಳಿವೆ. ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಸದ್ಯ ಶಾಸಕ ಜಿ.ಟಿ. ದೇವೇಗೌಡ ನಮ್ಮನ್ನು ಬಿಟ್ಟು ಎಲ್ಲಿ ಹೋಗಿದ್ದಾರೆ? ಅವರು ಇನ್ನೂ ಜೆಡಿಎಸ್ನಲ್ಲಿಯೇ ಇದ್ದಾರೆ.

ಅವರೇ ಮೊನ್ನೆ ಜೆಡಿಎಸ್ನಲ್ಲಿ ಇದ್ದೇನೆ ಎಂದು ಹೇಳಿದ್ದಾರೆ. ಸರ್ಕಾರಿ ಕಾರ್ಯಕ್ರಮಗಳಲ್ಲಿ ಬಿಜೆಪಿಯವರ ವೇದಿಕೆ ಹಂಚಿಕೊಳ್ಳುವುದು ಸಾಮಾನ್ಯ. ಇದಕ್ಕೆ ಬೇರೆ ರೀತಿಯ ಅರ್ಥಗಳನ್ನು ಕಲ್ಪಿಸಿಕೊಳ್ಳುವುದು ಬೇಡ ಎಂದು ಜಿಟಿಡಿ ಪರ ಬ್ಯಾಟಿಂಗ್ ಮಾಡಿದರು. ಇನ್ನು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಅವರ ಮುಂದಾಳತ್ವದಲ್ಲೇ ಗ್ರಾಮ ಪಂಚಾಯಿತಿ ಚುನಾವಣೆ ನಡೆಯಲಿದ್ದು, ಅವರು ಶಾಸಕರಾಗಿವಷ್ಟು ದಿನದವರೆಗೂ ನಮ್ಮ ಪಕ್ಷವನ್ನೇ ಬೆಂಬಲಿಸಬೇಕು ಎಂದು ಕುಮಾರಸ್ವಾಮಿ ಹೇಳಿದರು. ಜಿ.ಟಿ ದೇವೇಗೌಡ್ರು ಜೆಡಿಎಸ್‌ ಪಕ್ಷದ ಕಾರ್ಯಚಟುವಟಿಕೆಗಳಿಂದ ದೂರವಾಗಿ ಬಿಜೆಪಿ ನಾಯಕ ಸಂಘ ಬೆಳೆಸಿದ್ದರು.ಆದ್ರೆ, ಮೊನ್ನೇ ಅಷ್ಟೇ ಜಿ.ಟಿ.ದೇವೇಗೌಡ ಸಹ ನಾನು ಇನ್ನೂ ಜೆಡಿಎಸ್‌ನಲ್ಲೇ ಇದ್ದೇನೆ ಎಂದು ಹೇಳಿದ್ದರು. ಈ ಮೂಲಕ ಬಿಜೆಪಿಯತ್ತ ಇದ್ದ ಚಿತ್ತ ಬದಲಾಯಿಸಿದ್ರಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.


ಜಾಹಿರಾತು: ನಿಮ್ಮ ಏನೇ ಸಮಸ್ಯೆ ಇದ್ದರೂ ಕೂಡಲೇ ಈ ಕೆಳಕಂಡ ಸಂಖ್ಯೆಗೆ ಕರೆ ಮಾಡಿ!

ಪಂಡಿತ್ ದಾಮೋದರ್ ಭಟ್
ದಕ್ಷಿಣ ಕರ್ನಾಟಕದ ಖ್ಯಾತ
ಜ್ಯೋತಿಷ್ಯರು ಮತ್ತು ಆಧ್ಯಾತ್ಮಿಕ ಚಿಂತಕರು
ನಿಮ್ಮ ಕುಟುಂಬದ ಯಾವುದೇ ಸಮಸ್ಯೆ ಹೇಳಿಕೊಳ್ಳಬಹುದಾದ
ಅಥವಾ ಅಲ್ಲದ, ವಿದ್ಯಾಭ್ಯಾಸ ವ್ಯವಹಾರದ ಕಷ್ಟ,
ಆರ್ಥಿಕ ಸಂಕಷ್ಟಕ್ಕೆ ಮೂಲಕಾರಣ ಮತ್ತು ಅದಕ್ಕೆ ಸೂಕ್ತ ಪರಿಹಾರ ಶತಸಿದ್ಧ!

ಈಗಲೇ ಕರೆಮಾಡಿ : 9008611444


ಜಾಹಿರಾತು: ವೆರಿಕೋಸ್ ವೇಯ್ನ್ ನಿಂದ ಬಳಲುತ್ತಿದ್ದೀರಾ? ಚಿಂತೆ ಬಿಡಿ ವೆರಿಕೋಸ್ ವೇಯ್ನ್ ಗೆ ಆಪರೇಷನ್ ಇಲ್ಲದೆಯೇ ಚಿಕಿತ್ಸೆ ನೀಡುತ್ತಾರೆ ಖ್ಯಾತ ವೈದ್ಯ ಡಾ. ಉರಾಳ್. ಹೆಚ್ಚಿನ ಮಾಹಿತಿಗಾಗಿ ಈಗಲೇ ಸಂಪರ್ಕಿಸಿ ವೆರಿಕೋಸ್ ವೇಯ್ನ್ ರೋಗಿಗಳ ಆಶಾಕಿರಣ ಆಪರೇಷನ್ ರಹಿತ ಆಯುರ್ವೇದ ಪರಿಹಾರ. ಡಾ. ಉರಾಳ್ ವೆರಿಕೋಸ್ ವೇಯ್ನ್ ಆಯುರ್ವೇದ ಕ್ಯೂರ್ ಸಂಸ್ಥೆ ಶೃಂಗೇರಿ. +91 81053 71042 , 8310191364.
http://www.uralsayurveda.in https://www.facebook.com/DrUrals/