ನಾಯಕತ್ವ ಬದಲಾವಣೆಯ ವಿಷಯದಲ್ಲಿ ಕೊನೆಗೂ ಮೌನ ಮುರಿದ ಬಿಜೆಪಿ ಉಸ್ತುವಾರಿ ಸಚಿವ ಅರುಣ್ ಸಿಂಗ್!

ಬೆಂಗಳೂರು: ರಾಜ್ಯದಲ್ಲಿ ಕೆಲ ದಿನಗಳಿಂದ ಜೋರಾಗಿ ಎದ್ದಿದ್ದ ನಾಯಕತ್ವ ಬದಲಾವಣೆ ಕೂಗಿಗೆ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಹಾಗೂ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಖುದ್ದು ತೆರೆ ಎಳೆದಿದ್ದಾರೆ. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ರಾಜ್ಯ ಬಿಜೆಪಿ ನಾಯಕತ್ವದಲ್ಲಿ ಬದಲಾವಣೆಯಿಲ್ಲ. ರಾಜ್ಯದಲ್ಲಿ ಸಿಎಂ ಯಡಿಯೂರಪ್ಪ ಉತ್ತಮ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ, ಹೀಗಾಗಿ ಅವರನ್ನು ಬದಲಾವಣೆ ಮಾಡುವ ಪ್ರಮೇಯವೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಯಡಿಯೂರಪ್ಪ ಅವರು ದೊಡ್ಡ ನಾಯಕರು, ಮಾಸ್ ಲೀಡರ್, ಸಮಾಜದ ಎಲ್ಲಾ ವರ್ಗಗಳ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಇದಕ್ಕೂ ಮೊದಲು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಹಲವು ರಾಜ್ಯ ಬಿಜೆಪಿ ನಾಯಕರು ಈ ನಾಯಕತ್ವ ಬದಲಾವಣೆ ಸುದ್ದಿಗೆ ಸ್ಪಷ್ಟನೆ ನೀಡಿದ್ದರು, ಯಡಿಯೂರಪ್ಪ ತಮ್ಮ ಅವಧಿ ಪೂರ್ಣಗೊಳಿಸಲಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಆದರೆ ಈಗ ಖುದ್ದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಯಡಿಯೂರಪ್ಪ ಅವರ ಬೆನ್ನಿಗೆ ನಿಂತಿರುವುದು ವಿಶೇಷ.

ಇದನ್ನೂ ಓದಿ :  ಮಂದಿರ ನಿರ್ಮಾಣಕ್ಕೆ 1 ಲಕ್ಷ ರೂ ನೀಡಿದ ಶಿವಮೊಗ್ಗದ ಮುಸ್ಲಿಂ ವ್ಯಕ್ತಿ!

ಜಾಹಿರಾತು: ವೆರಿಕೋಸ್ ವೇಯ್ನ್ ನಿಂದ ಬಳಲುತ್ತಿದ್ದೀರಾ? ಚಿಂತೆ ಬಿಡಿ ವೆರಿಕೋಸ್ ವೇಯ್ನ್ ಗೆ ಆಪರೇಷನ್ ಇಲ್ಲದೆಯೇ ಚಿಕಿತ್ಸೆ ನೀಡುತ್ತಾರೆ ಖ್ಯಾತ ವೈದ್ಯ ಡಾ. ಉರಾಳ್. ಹೆಚ್ಚಿನ ಮಾಹಿತಿಗಾಗಿ ಈಗಲೇ ಸಂಪರ್ಕಿಸಿ ವೆರಿಕೋಸ್ ವೇಯ್ನ್ ರೋಗಿಗಳ ಆಶಾಕಿರಣ ಆಪರೇಷನ್ ರಹಿತ ಆಯುರ್ವೇದ ಪರಿಹಾರ. ಡಾ. ಉರಾಳ್ ವೆರಿಕೋಸ್ ವೇಯ್ನ್ ಆಯುರ್ವೇದ ಕ್ಯೂರ್ ಸಂಸ್ಥೆ ಶೃಂಗೇರಿ. +91 81053 71042 , 8310191364.
http://www.uralsayurveda.in https://www.facebook.com/DrUrals/