ಕಾಂಗ್ರೆಸ್ ನಲ್ಲಿ ಬಿನ್ನಮತ ಸ್ಪೋಟ! ; ತಮ್ಮ ಬಿನ್ನಮತ ಹೊರಹಾಕಿದ ಸಿ.ಎಂ. ಇಬ್ರಾಹಿಂ!

ಬೆಂಗಳೂರು: ವಿಧಾನ ಪರಿಷತ್‌ ಸದಸ್ಯ, ಕಾಂಗ್ರೆಸ್‌ ಮುಖಂಡ ಸಿ.ಎಂ. ಇಬ್ರಾಹಿಂ ಅವರು ಪಕ್ಷದ ವಿರುದ್ಧವೇ ವಾಗ್ದಾಳಿ ನಡೆಸಿದ್ದು, ಶೇ.16ರಷ್ಟುಜನಸಂಖ್ಯೆಯಿರುವ ಮುಸ್ಲಿಮರು ಒಂದು ಬಾರಿಯೂ ಕೆಪಿಸಿಸಿ ಅಧ್ಯಕ್ಷರಾಗಿಲ್ಲ. ಮುಸ್ಲಿಮರು ಇನ್ನೆಷ್ಟು ವರ್ಷ ಕಾಂಗ್ರೆಸ್‌ ಪಕ್ಷಕ್ಕೆ ಮತ ಹಾಕಬೇಕು ಎಂದು ಕಿಡಿ ಕಾರಿದ್ದಾರೆ. ‘ಮುಸ್ಲಿಮರು ನಿಮಗೆ ಮತ ಹಾಕಲು ಮಾತ್ರ ಬೇಕಾ? ನಾವು ಮುಂದೆ ಬಂದು ನಿಮಗೆ ಮತ ಹಾಕಿ ಹಿಂದೆ ಹೋಗಿ ನಿಲ್ಲಬೇಕಾ?’ ಎಂದು ಕಾಂಗ್ರೆಸ್‌ ಮುಖಂಡರನ್ನು ಪ್ರಶ್ನಿಸಿರುವ ಅವರು, ತಮ್ಮ ಮುಂದಿನ ರಾಜಕೀಯ ನಡೆ ಬಗ್ಗೆ ರಾಜ್ಯಾದ್ಯಂತ ಪ್ರವಾಸ ಮಾಡಿದ ಬಳಿಕ ಘೋಷಿಸುವುದಾಗಿ ಹೇಳಿದರು. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಾತಂತ್ರ್ಯ ಬಂದ ದಿನದಿಂದಲೂ ಮುಸ್ಲಿಮರು ಕಾಂಗ್ರೆಸ್‌ ಪಕ್ಷವನ್ನು ಬೆಂಬಲಿಸಿದ್ದೇವೆ.

ಇನ್ನು ಎಷ್ಟುವರ್ಷ ಕಾಂಗ್ರೆಸ್‌ಗೆ ಮತ ಹಾಕುತ್ತಿರಬೇಕು. ನಾವು ಮುಂದೆ ಬಂದು ನಿಮಗೆ ಮತ ಹಾಕುವುದು. ನೀವು ಮುಂದೆ ನಿಂತುಕೊಂಡರೆ ನಾವು ಹಿಂದೆ ಹೋಗುವುದು. ಒಬ್ಬನೇ ಒಬ್ಬ ಮುಸ್ಲಿಮನಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿಲ್ಲ. ಶೇ.16ರಷ್ಟುಇರುವ ಮುಸ್ಲಿಮರು ನಿಮಗೆ ಮತ ಹಾಕಲು ಮಾತ್ರ ಬೇಕಾ ಎಂದು ಕಾಂಗ್ರೆಸ್‌ ನಾಯಕರನ್ನು ಪ್ರಶ್ನಿಸಿದರು. ನನ್ನ ರಾಜಕೀಯ ನಡೆಯ ಬಗ್ಗೆ ಯಾವುದೇ ಅನುಮಾನ ಬೇಡ. ಪಕ್ಷದಲ್ಲಿ ಮುಸ್ಲಿಂ ನಾಯಕತ್ವದ ಸಂಘರ್ಷ ನನ್ನ ನಡೆಗೆ ಕಾರಣ ಎನ್ನುವುದು ಸಹ ಸರಿಯಲ್ಲ. ರಾಜ್ಯಾದ್ಯಂತ ಪ್ರವಾಸ ಮಾಡಿದ ಬಳಿಕ ನನ್ನ ನಿಲುವು ಪ್ರಕಟಿಸುತ್ತೇನೆ. ನನ್ನನ್ನು ಭೇಟಿ ಮಾಡಲು ಆಗಮಿಸಿದ್ದ ಡಿ.ಕೆ. ಶಿವಕುಮಾರ್‌ ಅವರಿಗೂ ಇದನ್ನೇ ತಿಳಿಸಿದ್ದೇನೆ ಎಂದರು.

ಇದನ್ನೂ ಓದಿ :  ಬ್ರೇಕಿಂಗ್ ನ್ಯೂಸ್ : ಪಾಲ್ಘರ್ ಸಾಧುಗಳ ಹ"ತ್ಯೆ ಗೆ ಕೊನೆಗೂ ಸಿಗಲೇ ಇಲ್ಲ ನ್ಯಾಯ! ಮಹತ್ವದ ತಿರುವು

ಜಾಹಿರಾತು: ವೆರಿಕೋಸ್ ವೇಯ್ನ್ ನಿಂದ ಬಳಲುತ್ತಿದ್ದೀರಾ? ಚಿಂತೆ ಬಿಡಿ ವೆರಿಕೋಸ್ ವೇಯ್ನ್ ಗೆ ಆಪರೇಷನ್ ಇಲ್ಲದೆಯೇ ಚಿಕಿತ್ಸೆ ನೀಡುತ್ತಾರೆ ಖ್ಯಾತ ವೈದ್ಯ ಡಾ. ಉರಾಳ್. ಹೆಚ್ಚಿನ ಮಾಹಿತಿಗಾಗಿ ಈಗಲೇ ಸಂಪರ್ಕಿಸಿ ವೆರಿಕೋಸ್ ವೇಯ್ನ್ ರೋಗಿಗಳ ಆಶಾಕಿರಣ ಆಪರೇಷನ್ ರಹಿತ ಆಯುರ್ವೇದ ಪರಿಹಾರ. ಡಾ. ಉರಾಳ್ ವೆರಿಕೋಸ್ ವೇಯ್ನ್ ಆಯುರ್ವೇದ ಕ್ಯೂರ್ ಸಂಸ್ಥೆ ಶೃಂಗೇರಿ. +91 81053 71042 , 8310191364.
http://www.uralsayurveda.in https://www.facebook.com/DrUrals/