ಇವರು ಹೈಕಮಾಂಡ್ ಗೆ ಬೇಡವಾದ ಕೂಸು: ರವಿಕುಮಾರ್ ಲೇವಡಿರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ಆಗುಹೋಗಗಳು ದಿನೇ ದಿನೇ – ಬೇರೇ ಬೇರೇ ರೂಪಗಳನ್ನು ಪಡೆದುಕೊಳ್ಳುತ್ತಿರುವುದರಿಂದ ಹಲವು ನಾಯಕರು ಹಲವು ರೀತಿಯ ಹೇಳಿಕೆಗಳನ್ನು ನೀಡಿ ರಾಜಕಾರಣದಲ್ಲಿ ಗೊಂದಲಗಳನ್ನು ಸೃಷ್ಟಿಸುತ್ತಿದ್ದಾರೆ.

ಇದರ ನಡುವೆ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಎನ್.ರವಿಕುಮಾರ್‌ ನಿಬ್ಬೆರಗಾಗುವಂತಹ ಹೇಳಿಕೆಯೂಂದನ್ನು ನೀಡಿದ್ದಾರೆ.

ಬೆಂಗಳೂರು: ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಹೈಕಮಾಂಡ್‌ಗೆ ಬೇಡವಾದ ಕೂಸಾಗಿದ್ದು, ಆ ಪಕ್ಷದ ಮಾಜಿ ರಾಷ್ಟ್ರೀಯ ಅಧ್ಯ ಕ್ಷರಂತೆ ಹಗಲಿನಲ್ಲಿ ಒಂದುರೀತಿ, ರಾತ್ರಿ ಒಂದು ರೀತಿ ಮಾತಾಡುತ್ತಾರೆ. ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಎನ್.ರವಿಕುಮಾರ್‌ ಲೇವಡಿ ಮಾಡಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಜನ ಕಷ್ಟದಲ್ಲಿ ಕೀಳು ಮಟ್ಟದ ರಾಜಕೀಯ ಮಾಡುವುದು ಸಿದ್ದರಾಮಯ್ಯ ಅವರಂತಹ ಹಿರಿಯರಿಗೆ ಶೋಭೆ ತರುವುದಿಲ್ಲ. ಕೋವಿಡ್ ಲಸಿಕೆ ಬಗ್ಗೆ ಜನರಲ್ಲಿ ಗೊಂದಲ , ಭಯ ಮೂಡಿಸಿದ್ದ ಕಾಂಗ್ರೆಸ್ ನಾಯಕರೇ ಇದೀಗ ಸಾಲಿನಲ್ಲಿ ನಿಲ್ಲುತ್ತಿದ್ದಾರೆ. ಈ ಹಿಂದೆ ಮೈಸೂರು ಮಹಿಳಾ ಜಿಲ್ಲಾಧಿಕಾರಿ ಜೊತೆ ಸಿದ್ದರಾಮಯ್ಯ ಅವರ ಶಿಷ್ಯಂದಿರು ಹೇಗೆ ನಡೆದುಕೊಂಡಿದ್ದರು ಎಂಬುದನ್ನು ರಾಜ್ಯದ ಜನ ಮರೆತಿಲ್ಲ ಎಂದು ಹೇಳಿದರು..

ಇದನ್ನೂ ಓದಿ :  ಲಡಾಖ್‌ ಗಡಿ ಬಳಿ ಮತ್ತೆ ಚೀನಾ ತಂಟೆ