ಲವ್ ಜಿಹಾದ್ ಬಗ್ಗೆ ಖಡಕ್ ಹೇಳಿಕೆ ನೀಡಿದ ಪ್ರತಾಪ್ ಸಿಂಹ! , ಈಗ ಪುಲ್ ವೈರಲ್.

ಮಡಿಕೇರಿ: ಮದುವೆಗೆ ಮುನ್ನ ಮತಾಂತರ ಕಡ್ಡಾಯ ಎಂಬುವವರು ಹುಟ್ಟು ಮತಾಂಧರಾಗಿದ್ದು, ಇಂಥ ಒತ್ತಡ ಹೇರುವವರ ವಿರುದ್ಧ ಕಠಿಣ ಕಾನೂನು ಜಾರಿಗೆ ತರುವುದು ಅತ್ಯಗತ್ಯ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಪ್ರತಾಪ್ ಸಿಂಹ, ಮದುವೆಗೂ ಮುನ್ನ ಮತಾಂತರವಾಗಬೇಕು ಎಂಬ ಒತ್ತಡ ಹೇರಿದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಿದ್ದೇವೆ ಎಂದು ಈಗಾಗಲೇ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ ಹೇಳಿದ್ದಾರೆ. ಇದು ಸ್ವಾಗತಾರ್ಹ. ಕರ್ನಾಟಕದಲ್ಲಿಯೂ ಸಚಿವ ಸಿ.ಟಿ.ರವಿ ಇಂಥ ಕಾನೂನು ಜಾರಿ ಸಂಬಂಧ ಸಕಾ೯ರ ಒಲವು ತೋರುತ್ತದೆ ಎಂದಿದ್ದಾರೆ. ಇದು ಸೂಕ್ತ ನಿಧಾ೯ರವಾಗಲಿದೆ ಎಂದು ಹೇಳಿದರು. ಪ್ರೀತಿಸುವಾಗ ಅಡ್ಡಿ ಬಾರದ ಧರ್ಮದ ಮದುವೆಯಾಗುವಾಗ ಯಾಕೆ ಅಡ್ಡಿ ಬರುತ್ತಿದೆ ಎಂದು ಪ್ರಶ್ನಿಸಿದ ಪ್ರತಾಪ್ ಸಿಂಹ, ಇಂಥ ವ್ಯಕ್ತಿಗಳು ಪ್ರೀತಿಯ ನಾಟಕವಾಡಿ, ಧರ್ಮಾಂಧತೆ ಜತೆಗೆ ಮತಾಂತರದ ಉದ್ದೇಶ ಹೊಂದಿದ್ದಾರೆ. ಲವ್ ಜಿಹಾದ್ ಗೆ ಇದು ಉದಾಹರಣೆಯಾಗಿದೆ. ಇದಕ್ಕೆ ಕಡಿವಾಣ ಹಾಕಲು ಸೂಕ್ತ ಕಾನೂನು ಬೇಕೇಬೇಕು ಎಂದರು.

ರಾಜ್ಯದ ಮುಖ್ಯಮಂತ್ರಿಯಾದ ಕೂಡಲೇ ಟಿಪ್ಪುಜಯಂತಿ ರದ್ದುಮಾಡುವುದಾಗಿ ಹೇಳಿದ್ದ ಯಡಿಯೂರಪ್ಪ ನುಡಿದಂತೆ ನಡೆದುಕೊಂಡು ಟಿಪ್ಪು ಜಯಂತಿ ರದ್ದುಗೊಳಿಸಿದ್ದಾರೆ. ಇದೀಗ ಲವ್ ಜಿಹಾದ್ ಗೆ ಸಂಬಂಧಿಸಿದಂತೆಯೂ ಯಡಿಯೂರಪ್ಪ ಸೂಕ್ತ ನಿಧಾ೯ರ ಕೈಗೊಳ್ಳಲಿದ್ದಾರೆ ಎಂಬ ವಿಶ್ವಾಸ ತನಗಿದೆ ಎಂದೂ ಸಂಸದ ಪ್ರತಾಪ್ ಸಿಂಹ ಹೇಳಿದರು. ಗೋಣಿಕೊಪ್ಪದ ಯುವಕನೋವ೯ ಪಾಕಿಸ್ತಾನದ ಸೆರೆಮನೆಯಲ್ಲಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಪ್ರತಾಪ್ ಸಿಂಹ, ಈ ಬಗ್ಗೆ ತನಗೂ ಖಚಿತ ಮಾಹಿತಿ ಲಭಿಸಿಲ್ಲ. ಖಚಿತಮಾಹಿತಿ ಇದ್ದಲ್ಲಿ ಕೇಂದ್ರ ವಿದೇಶಾಂಗ ಸಚಿವರೊಂದಿಗೆ ವ್ಯವಹರಿಸಿ ಪಾಕಿಸ್ತಾನದ ಇಂಡಿಯನ್ ಹೈ ಕಮೀಷನರ್ ಗಮನಕ್ಕೂ ತಂದು ಆತನನ್ನು ಬಂಧಮುಕ್ತಗೊಳಿಸಿ ಭಾರತಕ್ಕೆ ಖಂಡಿತಾ ಕರೆತರಲಾಗುತ್ತದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸುತ್ತಿದ್ದೇನೆ ಎಂದೂ ಪ್ರತಾಪ್ ಸಿಂಹ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಇದನ್ನೂ ಓದಿ :  ಲಾಕ್ ಡೌನ್ ಬಳಿಕ ವ್ಯವಸಾಯವನ್ನು ತಮ್ಮ ವೃತ್ತಿಯಾಗಿಸಿದ ಬಾಲಿವುಡ್ ನ ಖ್ಯಾತ ನಟಿ ಯಾರು ಗೊತ್ತಾ?!

ಓಂ ಶ್ರೀ ಆದಿಶಕ್ತಿ ಚೌಡೇಶ್ವರಿ ಜ್ಯೋತಿಷ್ಯ ಪೀಠಂ. ನಿಮ್ಮ ಸಮಸ್ಯೆ ಏನೇ ಇರಲಿ ಕೇರಳ ಮತ್ತು ದಕ್ಷಿಣ ಕನ್ನಡದ 108 ಜ್ಯೋತಿಷ್ಯ ತಂತ್ರಗಳಿಂದ ನಿಮ್ಮ ನಿಗೂಢ ಗುಪ್ತ ಸಮಸ್ಯೆಗಳಿಗೆ, ತಾಂಬೂಲ ಪ್ರಶ್ನೆ ಮತ್ತು ಆರೂಢ ಪ್ರಶ್ನೆಯಿಂದ ಕೇವಲ 21 ಗಂಟೆಯಲ್ಲಿ ಶಾಶ್ವತ ಪರಿಹಾರ. ಖ್ಯಾತ ಜ್ಯೋತಿಷಿ, ಪಂಡಿತ್ ಶ್ರೀ ಶ್ರೀನಿವಾಸಮೂರ್ತಿ. ಇನ್ನು ನಿಮ್ಮ ಜೀವನದಲ್ಲಿ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ಕೇರಳದ 18 ದೈವಿಕ ಪೂಜಾ ಶಕ್ತಿಗಳಿಂದ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮಲ್ಲಿ ಸಮಸ್ಯೆಗಳಾದ ಮಾಟ ಮಂತ್ರ ನಿವಾರಣೆ, ಕೋರ್ಟ್ ವಿಚಾರ, ಆಸ್ತಿ ವಿಚಾರ, ಹಣಕಾಸಿನ ಸಮಸ್ಯೆ, ಸತಿಪತಿ ಕಲಹ, ಅತ್ತೆ-ಸೊಸೆ ಕಲಹ, ಮಕ್ಕಳ ವಿದ್ಯಭ್ಯಾಸದಲ್ಲಿ ತೊಂದರೆ, ಪ್ರೇಮ ಸಂಬಂಧದಂತ ಯಾವುದೇ ಸಮಸ್ಯೆಗಳಿಗೆ ಇಂದೇ ಕರೆ ಮಾಡಿ. 9108678938