ರೈತರು ಹಾಗೂ ಸಾರಿಗೆ ನೌಕರರ ಪ್ರತಿಭಟನೆ ಮುಗಿದ ಬೆನ್ನಲ್ಲೇ ಇದೀಗ ಮತ್ತೊಂದು ಘಟಕದಿಂದ ಶುರುವಾದ ಪ್ರತಿಭಟನೆ!ಬೆಂಗಳೂರು: ರೈತರು ಹಾಗೂ ಸಾರಿಗೆ ನೌಕರರ ಪ್ರತಿಭಟನೆ ಮುಗಿದ ಬೆನ್ನಲ್ಲೇ ಇದೀಗ ರಾಜಧಾನಿ ಬೆಂಗಳೂರಿನಲ್ಲಿ ಶಿಕ್ಷಕರು ಪ್ರತಿಭಟನೆಯ ಹಾದಿ ಹಿಡಿದಿದ್ದಾರೆ. ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಖಾಸಗಿ ಶಾಲಾ ಶಿಕ್ಷಕರು ಹೋರಾಟ ನಡೆಸಿದ್ದಾರೆ. ಅನುದಾನ ರಹಿತ ಖಾಸಗಿ ಶಾಲಾ ಶಿಕ್ಷಕರು ಬೆಂಗಳೂರಿನಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿದ್ದು, ತಳ್ಳುಗಾಡಿಗಳಲ್ಲಿ ತರಕಾರಿಗಳನ್ನು ತಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ವಿಶೇಷ ಅನುದಾನ ನೀಡಬೇಕು, ಶಿಕ್ಷಕರನ್ನು ಕೊರೊನಾ ಯೋಧರೆಂದು ಪರಿಗಣಿಸಬೇಕು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳಿಗೆ ವಿಮಾ ಸೌಲಭ್ಯ, ಶಾಲಾ ಶುಲ್ಕ ಬಾಕಿ ಉಳಿಸಿಕೊಂಡಿರುವ ಪೋಷಕರು ತಕ್ಷಣ ಬಾಕಿ ಶುಲ್ಕ ಪಾವತಿಗೆ ಆದೇಶ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಶಿಕ್ಷಕರು ಆಗ್ರಹಿಸಿದ್ದಾರೆ.

ಜಾಹಿರಾತು: ವೆರಿಕೋಸ್ ವೇಯ್ನ್ ನಿಂದ ಬಳಲುತ್ತಿದ್ದೀರಾ? ಚಿಂತೆ ಬಿಡಿ ವೆರಿಕೋಸ್ ವೇಯ್ನ್ ಗೆ ಆಪರೇಷನ್ ಇಲ್ಲದೆಯೇ ಚಿಕಿತ್ಸೆ ನೀಡುತ್ತಾರೆ ಖ್ಯಾತ ವೈದ್ಯ ಡಾ. ಉರಾಳ್. ಹೆಚ್ಚಿನ ಮಾಹಿತಿಗಾಗಿ ಈಗಲೇ ಸಂಪರ್ಕಿಸಿ ವೆರಿಕೋಸ್ ವೇಯ್ನ್ ರೋಗಿಗಳ ಆಶಾಕಿರಣ ಆಪರೇಷನ್ ರಹಿತ ಆಯುರ್ವೇದ ಪರಿಹಾರ. ಡಾ. ಉರಾಳ್ ವೆರಿಕೋಸ್ ವೇಯ್ನ್ ಆಯುರ್ವೇದ ಕ್ಯೂರ್ ಸಂಸ್ಥೆ ಶೃಂಗೇರಿ. +91 81053 71042 , 8310191364.
http://www.uralsayurveda.in https://www.facebook.com/DrUrals/