ಕಾಂಗ್ರೆಸ್ ನ ಮಾಜಿ ಮಂತ್ರಿ ರೋಷನ್ ಬೇಗ್ ಆರೆಸ್ಟ್ ; ಪರಪ್ಪನ ಅಗ್ರಹಾರಕ್ಕೆ ಶಿಫ್ಟ್, ಇಲ್ಲಿದೆ ಮಾಹಿತಿಬೆಂಗಳೂರು: ಐಎಂಎ ಕಂಪನಿಯ ಸಂಸ್ಥಾಪಕ ಮನ್ಸೂರ್‌ ಖಾನ್‌ ಒತ್ತಡದಿಂದಾಗಿ ಸಿಬಿಐ ಇಂದು ಮಾಜಿ ಮಂತ್ರಿ, ಶಿವಾಜಿ ನಗರದ ಮಾಜಿ ಶಾಸಕ ರೋಷನ್‌ ಬೇಗ್‌ ಅವರನ್ನು ಬಂಧಿಸಿದೆ. ರೋಷನ್‌ ಬೇಗ್‌ ಅವರನ್ನು ಬಂಧಿಸಿದ ಸಿಬಿಐ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಕೋರ್ಟ್‌ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಈಗ ರೋಷನ್‌ ಬೇಗ್‌ ಅವರನ್ನು ಸಿಬಿಐ ಅಧಿಕಾರಿಗಳು ಪರಪ್ಪನ ಅಗ್ರಹಾರಕ್ಕೆ ಕರೆದುಕೊಂಡು ಹೋಗುತ್ತಿದ್ದಾರೆ. ಈ ನಡುವೆ ಮನ್ಸೂರ್‌ ಖಾನ್‌ ನಾನು ರೋಷನ್‌ ಬೇಗ್‌ ಅವರಿಗೆ ಹಣ ನೀಡಿದ್ದೇನೆ. ಈ ಹಣವನ್ನು ರೋಷನ್‌ ಬೇಗ್‌ ಅವರಿಂದ ಪಡೆಯಲೇಬೇಕು ಎಂದು ಹೇಳಿದ್ದಾನೆ.

ಒಂದು ವೇಳೆ ಹಣವನ್ನು ಪಡೆಯದೇ ಇದ್ದರೆ ನಿಮ್ಮ ವಿರುದ್ಧವೇ ನ್ಯಾಯಾಧೀಶರಿಗೆ ದೂರು ನೀಡುತ್ತೇನೆ ಎಂದು ಮನ್ಸೂರ್‌ ಖಾನ್‌  ಸಿಬಿಐ ಅಧಿಕಾರಿಗಳ ಮೇಲೆ ಒತ್ತಡ ಹಾಕಿದ್ದ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ರೋಷನ್‌ ಬೇಗ್‌ ಅವರಿಗೆ ಮನ್ಸೂರ್‌ ಖಾನ್‌ 200 ಕೋಟಿ ಸೇರಿದಂತೆ ಐಷಾರಾಮಿ ಕಾರು, ಉಡುಗೊರೆ ನೀಡಿದ್ದ ಆರೋಪ ಈ ಪ್ರಕರಣ ಬೆಳಕಿಗೆ ಬಂದಾಗಲೇ ಬಂದಿತ್ತು. ಆದರೆ ಈಗ ಮನ್ಸೂರ್‌ ಖಾನ್‌ ಒತ್ತಡ ಹಾಕಿದ್ದ ಕಾರಣ ಇಂದು ಬೆಳಗ್ಗೆ ಸಿಬಿಐ ಅಧಿಕಾರಿಗಳು ಮನೆಗೆ ತೆರಳಿ ರೋಷನ್‌ ಬೇಗ್‌ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ  ಸಂಜೆಯ ವೇಳೆ ಬಂಧಿಸಿದೆ.

ಇದನ್ನೂ ಓದಿ :  ಇವರು ಹೈಕಮಾಂಡ್ ಗೆ ಬೇಡವಾದ ಕೂಸು: ರವಿಕುಮಾರ್ ಲೇವಡಿ

ಜಾಹಿರಾತು: ವೆರಿಕೋಸ್ ವೇಯ್ನ್ ನಿಂದ ಬಳಲುತ್ತಿದ್ದೀರಾ? ಚಿಂತೆ ಬಿಡಿ ವೆರಿಕೋಸ್ ವೇಯ್ನ್ ಗೆ ಆಪರೇಷನ್ ಇಲ್ಲದೆಯೇ ಚಿಕಿತ್ಸೆ ನೀಡುತ್ತಾರೆ ಖ್ಯಾತ ವೈದ್ಯ ಡಾ. ಉರಾಳ್. ಹೆಚ್ಚಿನ ಮಾಹಿತಿಗಾಗಿ ಈಗಲೇ ಸಂಪರ್ಕಿಸಿ ವೆರಿಕೋಸ್ ವೇಯ್ನ್ ರೋಗಿಗಳ ಆಶಾಕಿರಣ ಆಪರೇಷನ್ ರಹಿತ ಆಯುರ್ವೇದ ಪರಿಹಾರ. ಡಾ. ಉರಾಳ್ ವೆರಿಕೋಸ್ ವೇಯ್ನ್ ಆಯುರ್ವೇದ ಕ್ಯೂರ್ ಸಂಸ್ಥೆ ಶೃಂಗೇರಿ. +91 81053 71042 , 8310191364.
http://www.uralsayurveda.in https://www.facebook.com/DrUrals/