ಸೋನಿಯಾ ಗಾಂಧಿ ಸಭೆಯಲ್ಲಿ ಕಾಂಗ್ರೆಸ್ ಗೆ ಶಾಕ್ ನೀಡಿದ ಪಕ್ಷದ ಪ್ರಮುಖ ನಾಯಕಿಯ ರಾಜಿನಾಮೆ?!ನವದೆಹಲಿ: ಕಾಂಗ್ರೆಸ್ ಪಕ್ಷದಲ್ಲಿ ನಾಯಕರ ನಡುವಿನ ಮನಸ್ತಾಪ, ಒಡಕು, ಬಂಡಾಯ ಕಳೆದ ಹಲವು ತಿಂಗಳುಗಳಿಂದ ನಡೆಯುತ್ತಿದೆ. ನಾಯಕತ್ವದ ಬದಲಾವಣೆ, ಪಕ್ಷ ಬಲಪಡಿಸುವಿಕೆ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ಗಾಂಧಿ ಪರಿವಾರದ ವಿರುದ್ಧ ಸಿಡಿದೆದ್ದಿದ್ದರು. ಬಂಡಾಯ ಶಮನಕ್ಕೆ ಖುದ್ದು ಸೋನಿಯಾ ಗಾಂಧಿ ಸಭೆ ಆಯೋಜಿಸಿದ್ದಾರೆ. ಈದರೆ ಸಭೆ ದಿನವೇ ಪಕ್ಷದ ನಾಯಕಿ ರಾಜೀನಾಮೆ ನೀಡಿ ಹೊರಬಂದಿದ್ದಾರೆ. ರಾಹುಲ್ ಗಾಂಧಿ ಆಪ್ತೆ, ಕಾಂಗ್ರೆಸ್ ವಿದ್ಯಾರ್ಥಿ ಸಂಘಟನೆ NSUI ಜಂಟಿ ಕಾರ್ಯದರ್ಶಿ ರುಚಿ ಗುಪ್ತಾ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ ಹೊರಬಂದಿದ್ದಾರೆ.

ಸಾಂಸ್ಥಿಕ ಬದಲಾವಣೆ ತರುವಲ್ಲಿ ನಾಯಕ ಕೆಸಿ ವೇಣುಗೋಪಾಲ ವಿಳಂಬ ನೀತಿ ಅನುಸರಿಸುತ್ತಿದ್ದಾರೆ. ಇದು ಪಕ್ಷಕ್ಕೆ ತಮಗೆ ತೀವ್ರ ಹಿನ್ನಡೆಯನ್ನುಂಟು ಮಾಡುತ್ತಿದೆ. ಈ ಕುರಿತು ಹಲವು ಬಾರಿ ಮನವಿ ಮಾಡಿದರೂ ಯಾವುದೇ ಪ್ರಗತಿ ಕಂಡಿಲ್ಲ ಎಂದು ಬೇಸತ್ತ ನಾಯಕಿ ರುಚಿ ಗುಪ್ತಾ ರಾಜೀನಾಮೆ ನೀಡಿದ್ದಾರೆ. ಸೋನಿಯಾರಿಂದ ಯುಪಿಎ ಸೋಲು, ಮೋದಿ ಮೊದಲ ಅವಧಿ ನಿರಂಕುಶ ಸೋನಿಯಾ ಗಾಂಧಿ ಬಿನ್ನರ ಸಮಾಧಾನ ಪಡಿಸಲು ಸಭೆ ಆಯೋಜಿಸಿದ ದಿನವೇ ಕಾಂಗ್ರೆಸ್‌ನಲ್ಲಿ ರಾಜೀನಾಮೆ ಮತ್ತೆ ಪಕ್ಷವನ್ನು ಇಕ್ಕಟ್ಟಿಗೆ ಸಿಲುಸಿಕಿದೆ. ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್‌ಗೆ ರಾಜೀನಾಮೆ ಶಾಕ್ ತಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಇದರ ಬೆನ್ನಲ್ಲೇ ಇದೀಗ ಕಾಂಗ್ರಸ್ ಪಕ್ಷದಲ್ಲೂ ರಾಜೀನಾಮೆ ಆರಂಭಗೊಂಡಿದೆ.

ಜಾಹಿರಾತು: ವೆರಿಕೋಸ್ ವೇಯ್ನ್ ನಿಂದ ಬಳಲುತ್ತಿದ್ದೀರಾ? ಚಿಂತೆ ಬಿಡಿ ವೆರಿಕೋಸ್ ವೇಯ್ನ್ ಗೆ ಆಪರೇಷನ್ ಇಲ್ಲದೆಯೇ ಚಿಕಿತ್ಸೆ ನೀಡುತ್ತಾರೆ ಖ್ಯಾತ ವೈದ್ಯ ಡಾ. ಉರಾಳ್. ಹೆಚ್ಚಿನ ಮಾಹಿತಿಗಾಗಿ ಈಗಲೇ ಸಂಪರ್ಕಿಸಿ ವೆರಿಕೋಸ್ ವೇಯ್ನ್ ರೋಗಿಗಳ ಆಶಾಕಿರಣ ಆಪರೇಷನ್ ರಹಿತ ಆಯುರ್ವೇದ ಪರಿಹಾರ. ಡಾ. ಉರಾಳ್ ವೆರಿಕೋಸ್ ವೇಯ್ನ್ ಆಯುರ್ವೇದ ಕ್ಯೂರ್ ಸಂಸ್ಥೆ ಶೃಂಗೇರಿ. +91 81053 71042 , 8310191364.
http://www.uralsayurveda.in https://www.facebook.com/DrUrals/