ಬಿಎಸ್ ವೈ ಮೇಲೆ ಮತ್ತೆ ಅಸಮಾಧಾನದ ಹೊಗೆಬೆಂಗಳೂರು : ಹೈಕಮಾಂಡ್ ಹೇಳಿದರೆ ತಕ್ಷಣವೇ ರಾಜೀನಾಮೆ ಕೊಡುತ್ತೇನೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿಕೆ ನೀಡಿದ ನಂತರ ಉದ್ಭವಿಸಿರುವ ಬಿಜೆಪಿಯಲ್ಲಿನ ವಾತಾವರಣ ಮತ್ತಷ್ಟು ಹದಗೆಡುವ ಲಕ್ಷಣಗಳು ಕಂಡು ಬಂದಿದ್ದು ವಿಧಾನಸಭೆಯ ಮುಖ್ಯ ಸಚೇತಕ ಸುನಿಲ್ ಕುಮಾರ್ ಮಂಗಳವಾರ ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ಬಹಿರಂಗವಾಗಿಯೇ ಮನವಿ ಮಾಡಿದ್ದಾರೆ.

ಪಕ್ಷ ನಿಷ್ಟ್ಠೆ ಹಾಗೂ ಸಂಘ ನಿಷ್ಠೆ ಶಾಸಕರ ಗುಂಪಿನಲ್ಲಿ ಗುರುತಿಸಿಕೊಂಡಿದ್ದ ಬಿಜೆಪಿ ಶಾಸಕಾಂಗ ಪಕ್ಷದ ಕಾರ್ಯದರ್ಶಿಯೂ ಆಗಿರುವ ಮುಖ್ಯ ಸಚೇತಕ ಸುನಿಲ್ ಕುಮಾರ್ ಇದೇ ಮೊದಲ ಬಾರಿಗೆಬಹಿರಂಗವಾಗಿ ಪಕ್ಷದಲ್ಲಿನ ಬೆಳವಣಿಗೆಗಳ ಬಗೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಕಳೆದ ಮೂರು ದಿನಗಳಿಂದ ಮಾಧ್ಯಮಗಳಲ್ಲಿ ಬರುತ್ತಿರುವ ಹೇಳಿಕೆಗಳು ಪಕ್ಷದ ಹಿತದೃಷ್ಟಿಯಿಂದ ಒಳ್ಳೆಯ ಬೆಳವಣಿಗೆ ಅಲ್ಲ. ಕೆಲವು ವ್ಯಕ್ತಿಗಳು ವ್ಯಕ್ತಪಡಿಸುವ ಅಭಿಪ್ರಾಯಗಳು ಪಕ್ಷದ ಎಲ್ಲಾ ಶಾಸಕರು ಮತ್ತು ಕಾರ್ಯಕರ್ತರ ಅಭಿಪ್ರಾಯವಲ್ಲ ಎಂದು ಮುಖ್ಯಮಂತ್ರಿಯಾ ದಿಯಾಗಿ ನಾಯಕತ್ವದ ಬಗ್ಗೆ ಬಹಿರಂಗವಾಗಿ ಹೇಳಿಕೆ ನೀಡಿದ ಎಲ್ಲ ನಾಯಕರ ವಿರುದ್ಧ ಅತೃಪ್ತಿ ವ್ಯಕ್ತಪಡಿಸಿದ್ದಾರೆ. ಮುಂದುವರೆದು ನಮ್ಮ ಅಭಿಪ್ರಾಯವನ್ನು ಮಾಧ್ಯಮಗಳ ಮುಂದೆ ವ್ಯಕ್ತಪಡಿಸಲು ಆಗುವುದಿಲ್ಲ. ಅದಕ್ಕಾಗಿ ಸೂಕ್ತ ವೇದಿಕೆ ಕಲ್ಪಿಸಿಕೊಡ ಬೇಕೆಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ, ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಹೆಸರುಗಳನ್ನು ಉಲ್ಲೇಖಿಸಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ :  ರಾಜಕಾರಣದ ಗೊಂದಲಕ್ಕೆ ಈ ಇಬ್ಬರ ನಾಯಕರ ಡಬಲ್ ಗೇಮ್ ನೇರ ಕಾರಣ: ಕುಟುಕಿದ ಈಶ್ವರಪ್ಪ

ಈ ಹಿಂದೆ ಸುನಿಲ್ ಕುಮಾರ್ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ರಾಜ್ಯ ಬಿಜೆಪಿ ಅಧ್ಯಕ್ಷ ಕಟೀಲ್ ಅವರಿಗೆ ನೇರವಾಗಿ ಪತ್ರ ಬರೆದು ಸಿಎಂ ಯಡಿಯೂರಪ್ಪ ವಿರುದ್ಧ ತಮ್ಮ ಅಸಮಾಧಾನವನ್ನು ಪರೋಕ್ಷವಾಗಿ ವ್ಯಕ್ತಪಡಿಸಿದ್ದರು. ಇದೀಗ ಮತ್ತೊಮ್ಮೆ ರಾಷ್ಟ್ರೀಯ ನಾಯಕರಿಗೆ ನೇರ ಮನವಿ ಮಾಡುವ ಮೂಲಕ ಸಿಎಂ ವಿರುದ್ಧ ತಮ್ಮ ಅಸಮಾಧಾನವನ್ನು ಪರೋಕ್ಷವಾಗಿ ತೋಡಿಕೊಂಡಿದ್ದಾರೆ. ಈ ಮಧ್ಯೆ ರಾಷ್ಟ್ರೀಯ ವರಿಷ್ಠರು ಬುಧವಾರ ರಾಜ್ಯ ಘಟಕಕ್ಕೆ ಸಂದೇಶ ರವಾನಿಸಿ ಜೂನ್ 15 ರವರೆಗೆ ಯಾವುದೇ ಸಚಿವರು, ಶಾಸಕರು, ಮುಖಂಡರು ನಾಯಕತ್ವ ಬದಲಾವಣೆ ಸೇರಿದಂತೆ ಯಾವುದೇ ರಾಜಕೀಯ ವಿಚಾರವನ್ನು ಬಹಿರಂಗವಾಗಿ ಚರ್ಚಿಸಬಾರದೆಂದು ಕಟ್ಟಪ್ಪಣೆ ಹೊರಡಿಸಿದ್ದಾರೆ.