ವಿಮಾನದಲ್ಲಿ ಜನಿಸಿದ ಮಗುವಿಗೆ ಯಾರೂ ಊಹಿಸಲಾಗದ ಗಿಫ್ಟ್ ನೀಡಿದ ಇಂಡಿಗೋ, ಎಲ್ಲೆಡೆ ವ್ಯಾಪಕ ಪ್ರಶಂಸೆ!ಬೆಂಗಳೂರು, ಅಕ್ಟೋಬರ್ 9: ದೆಹಲಿಯಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಗೋ ವಿಮಾನದಲ್ಲಿ ಜನಿಸಿದ ಮಗುವಿಗೆ ವಿಮಾನಯಾನ ಸಂಸ್ಥೆ ಭರ್ಜರಿ ಆಫರ್ ನೀಡಿದೆ.

ಬುಧವಾರ ದೆಹಲಿಯಿಂದ ಬೆಂಗಳೂರಿಗೆ ಬರುತ್ತಿದ್ದಾಗ ಮಹಿಳೆಯು ಅವಧಿಪೂರ್ವ ಪ್ರಸವಕ್ಕೆ ಒಳಗಾಗಿ ಗಂಡುಮಗುವಿಗೆ ಜನ್ಮ ನೀಡಿದ್ದರು. ಈ ವಿಮಾನ ಸಂಜೆ 7.30ರ ವೇಳೆಗೆ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತಲುಪಿತ್ತು. ಈ ಮಗುವಿನ ಫೋಟೊ ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.

ದೆಹಲಿ-ಬೆಂಗಳೂರು ಇಂಡಿಗೋ ವಿಮಾನದಲ್ಲಿ ಮಗುವಿನ ಜನನ. ವಿಮಾನದಲ್ಲಿ ತುರ್ತು ಸೇವೆ ಸಲ್ಲಿಸಿ, ಮಹಿಳೆಯ ಸರಾಗ ಹೆರಿಗೆಗೆ ನೆರವಾದ ಇಂಡಿಗೋ ಸಿಬ್ಬಂದಿಯ ಪ್ರಯತ್ನ ವ್ಯಾಪಕ ಪ್ರಶಂಸೆಗೆ ಒಳಗಾಗಿದೆ.

ಈ ನಡುವೆ ವಿಮಾನದಲ್ಲಿ ಜನಿಸಿದ ಮಗುವಿಗೆ ಇಂಡಿಗೋ ವಿಮಾನಯಾನ ಸಂಸ್ಥೆಯು ಜೀವಿತಾವಧಿ ಉಚಿತ ಪ್ರಯಾಣ ಟಿಕೆಟ್ ಘೋಷಿಸಿದೆ. ಇನ್ನು ಮುಂದೆ ಆ ಮಗು ಜೀವಮಾನ ಪರ್ಯಂತ ಇಂಡಿಗೋ ವಿಮಾನದಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ.ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ. ಮಗು ನಿಲ್ದಾಣಕ್ಕೆ ಇಳಿಯುವ ವೇಳೆ ಇಂಡಿಗೋ ವಿಮಾನ ನಿಲ್ದಾಣದ ಸಿಬ್ಬಂದಿ ‘ಬೆಂಗಳೂರಿಗೆ ಸ್ವಾಗತ’ ಎಂಬ ಬ್ಯಾನರ್ ಹಿಡಿದು ಮಗುವನ್ನು ಸ್ವಾಗತಿಸಿದ್ದಾರೆ.

ಮಹಿಳೆಗೆ ಪ್ರಸವ ವೇದನೆ ಆರಂಭವಾದ ಸಂದರ್ಭದಲ್ಲಿ ಹೈದರಾಬಾದ್‌ನಲ್ಲಿ ತುರ್ತು ಲ್ಯಾಂಡಿಂಗ್ ಮಾಡಲು ಯೋಚಿಸಲಾಗಿತ್ತು. ಆದರೆ ವಿಮಾನದಲ್ಲಿದ್ದ ಇಬ್ಬರು ವೈದ್ಯರು ಹೆರಿಗೆ ಮಾಡಿಸಿದ್ದರಿಂದ ನೇರವಾಗಿ ಬೆಂಗಳೂರಿಗೆ ಬಂದೆವು ಎಂದು ವಿಮಾನದ ಪೈಲಟ್ ಕ್ಯಾಪ್ಟನ್ ಸಂಜಯ್ ಮಿಶ್ರಾ ತಿಳಿಸಿದ್ದಾರೆ.

ಜಾಹಿರಾತು : ವಾಕ್ ಸಿದ್ಧಿ ಜಪ ಸಿದ್ಧಿ ಯಂತ್ರ ಸಿದ್ಧಿ ಹಾಗೂ ಮಂತ್ರ ಸಿದ್ಧಿಯಲ್ಲಿ ಪರಿಣಿತಿ ಹೊಂದಿರುವ ಪಂಡಿತ್ ಶ್ರೀ ರಾಘವೇಂದ್ರ ಶರ್ಮಾ (ಕಟೀಲು) ಇವರು ವಶೀಕರಣ ಮಹಾ ಮಾಂತ್ರಿಕರು ಹಾಗೂ ಸರ್ವಸಿದ್ಧಿ ಸಾಧಕರಾದ ಇವರು ನಿಮ್ಮ ಧೀರ್ಘ ಕಾಲದ ಸಮಸ್ಯೆಗಳಿಗೆ ಮೂರೂ ದಿನದಲ್ಲಿ ಶಾಶ್ವತ ಪರಿಹಾರ ನೀಡುತ್ತಾರೆ. ಪ್ರೀತಿ ಪ್ರೇಮದ ಸಮಸ್ಯೆಗಳು ಅಥವ ಒಳ್ಳೆಯ ಸರ್ಕಾರೀ ಕೆಲಸ ಸಿಗಲು ಅಥವ ಹಣಕಾಸಿನ ಸಮಸ್ಯೆಗಳು ಅಥವ ಸ್ತ್ರೀ ವಶೀಕರಣ ಹಾಗೂ ಪುರುಷ ವಶೀಕರಣ ಆಗಲು ಇನ್ನು ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ. ಈ ಕೂಡಲೇ ಕೆಳಗೆ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ 9740202800 ವಿಳಾಸ : ಅಯ್ಯಪ್ಪ ಟೆಂಪಲ್ ರಸ್ತೆ ಕೆನರಾ ಎಟಿಎಂ ಮೇಲ್ಭಾಗ ಗಂಗಮ್ಮ ಸರ್ಕಲ್ ಜಾಲಹಳ್ಳಿ ಬೆಂಗಳೂರು.9740202800