ನಾನು ದನದ ಮಾಂಸ ತಿನ್ನುತ್ತೇನೆ. ಆಹಾರ ಪದ್ಧತಿ ನನ್ನ ಹಕ್ಕು. ಬೇಡ ಎನ್ನಲು ನೀನು ಯಾರು?!’ ; ಸಿದ್ಧರಾಮಯ್ಯಬೆಂಗಳೂರು: ‘ನಾನು ದನದ ಮಾಂಸ ತಿನ್ನುತ್ತೇನೆ. ಆಹಾರ ಪದ್ಧತಿ ನನ್ನ ಹಕ್ಕು. ಬೇಡ ಎನ್ನಲು ನೀನು ಯಾರು’ ಎಂದು ಅಧಿವೇಶನದಲ್ಲಿಯೇ ಕೇಳಿದ್ದೇನೆ. ನಮ್ಮವರು ಇದನ್ನು ಗಟ್ಟಿಯಾಗಿ ಹೇಳುವುದಿಲ್ಲ’ ಎಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸೋಮವಾರ ಹೇಳಿದರು. ನಗರದ ಕಾಂಗ್ರೆಸ್ ಭವನದಲ್ಲಿ ನಡೆದ ‘ಕಾಂಗ್ರೆಸ್‍ನ 136ನೇ ಸಂಸ್ಥಾಪನಾ ದಿನಾಚರಣೆ’ಯಲ್ಲಿ ಅವರು, ‘ನಾನು ಸಿದ್ಧಾಂತಕ್ಕೆ ಬದ್ಧ. ನಂಬಿರುವ ಸಿದ್ಧಾಂತಗಳನ್ನು ನಾವು ಗಟ್ಟಿಯಾಗಿ ಹೇಳಬೇಕು. ಕಾಂಗ್ರೆಸ್‍ಗೆ ಹಿನ್ನಡೆಯಾದರೆ ದೇಶದ ಬಡವರಿಗೆ, ದಲಿತರಿಗೆ, ಹಿಂದುಳಿದ ವರ್ಗಗಳಿಗೆ, ಅಲ್ಪಸಂಖ್ಯಾತರಿಗೆ ಹಿನ್ನಡೆ ಆದಂತೆ’ ಎಂದರು. ‘ನಾನು ದನದ ಮಾಂಸ ತಿನ್ನುತ್ತೇನೆ. ನೀನು ಯಾವನಯ್ಯ ಕೇಳೋಕೆ. ನೀನೂ ತಿನ್ನು ಎಂದು ಬಲವಂತ ಮಾಡಲ್ಲ. ನನ್ನ ಆಹಾರ ನನ್ನ ಇಷ್ಟ ಎನ್ನಲು ಹೆಚ್ಚು ಧೈರ್ಯ ಬೇಕೇ’ ಎಂದು ಪ್ರಶ್ನಿಸಿದರು.

‘ಕಾಂಗ್ರೆಸ್‍ನಲ್ಲಿ ಎಷ್ಟೋ ಜನರಿಗೆ ಪಕ್ಷದ ಸಿದ್ಧಾಂತವೇ ಗೊತ್ತಿಲ್ಲ. ಕಾಂಗ್ರೆಸ್ ಸಾಮಾಜಿಕ ನ್ಯಾಯದ ಪರ ಇದೆ. ಅರ್ಥ ಮಾಡಿಕೊಳ್ಳಬೇಕು’ ಎಂದರು. ‘ಪಕ್ಷದ ಬಗ್ಗೆ ಮಾತನಾಡಿದರೆ ಸಹಿಸಲಾರೆ’. ‘ರೈತರ ಹೋರಾಟದಲ್ಲಿ ನಾನು ಹಸಿರು ಶಾಲು ಹಾಕಿದ್ದನ್ನು ಉಲ್ಲೇಖಿಸಿ, ಕಾಂಗ್ರೆಸ್ ಶಾಲಿಗೆ ಶಕ್ತಿ ಇಲ್ಲವೆಂದು ಹಸಿರು ಶಾಲು ಹಾಕಿದ್ದಾರೆ’ ಎಂದು ಹೇಳಿದ್ದ ಎಚ್‌.ಡಿ.ಕುಮಾರಸ್ವಾಮಿಗೆ ತಿರುಗೇಟು ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ‘ನಿಮ್ಮ ತಂದೆಯವರನ್ನು ಪ್ರಧಾನಿ ಮಾಡಿದ್ದು ಇದೇ ಕಾಂಗ್ರೆಸ್ ಶಾಲು. ನಿಮ್ಮನ್ನು ಸಿ.ಎಂ ಮಾಡಿದ್ದೂ ಇದೇ ಶಾಲು. ವೈಯಕ್ತಿಕವಾಗಿ ನಿಂದಿಸಿದರೆ ಸಹಿಸಬಹುದು. ಪಕ್ಷದ ನಿಂದನೆ ಸಹಿಸಲಾರೆ’ ಎಂದರು. ‘ಜ.6ರಿಂದ 18ರವರೆಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಚುನಾವಣೆಯಲ್ಲಿ ಸೋತವರು, ಸಂಘ ಸಂಸ್ಥೆಗಳ ಮುಖ್ಯಸ್ಥರ ಸಭೆ ಮಂಗಳೂರು, ಬಿಡದಿ, ಕಲಬುರ್ಗಿ, ಹುಬ್ಬಳ್ಳಿ- ಧಾರವಾಡದಲ್ಲಿ ನಡೆಯಲಿದೆ. ಬೂತ್ ಮಟ್ಟದ ಸಮಿತಿ ರಚಿಸಲು ಪ್ರಜಾ ಪ್ರತಿನಿಧಿ ಆಯಪ್ ಸಿದ್ಧಪಡಿಸಿದ್ದೇನೆ. ಜ.30ರ ಒಳಗೆ ಪಂಚಾಯಿತಿ, ವಾರ್ಡ್‌ ಸಮಿತಿ ರಚಿಸುತ್ತೇವೆ’ ಎಂದು ತಿಳಿಸಿದರು.


ಜಾಹಿರಾತು: ನಿಮ್ಮ ಏನೇ ಸಮಸ್ಯೆ ಇದ್ದರೂ ಕೂಡಲೇ ಈ ಕೆಳಕಂಡ ಸಂಖ್ಯೆಗೆ ಕರೆ ಮಾಡಿ!

ಪಂಡಿತ್ ದಾಮೋದರ್ ಭಟ್
ದಕ್ಷಿಣ ಕರ್ನಾಟಕದ ಖ್ಯಾತ
ಜ್ಯೋತಿಷ್ಯರು ಮತ್ತು ಆಧ್ಯಾತ್ಮಿಕ ಚಿಂತಕರು
ನಿಮ್ಮ ಕುಟುಂಬದ ಯಾವುದೇ ಸಮಸ್ಯೆ ಹೇಳಿಕೊಳ್ಳಬಹುದಾದ
ಅಥವಾ ಅಲ್ಲದ, ವಿದ್ಯಾಭ್ಯಾಸ ವ್ಯವಹಾರದ ಕಷ್ಟ,
ಆರ್ಥಿಕ ಸಂಕಷ್ಟಕ್ಕೆ ಮೂಲಕಾರಣ ಮತ್ತು ಅದಕ್ಕೆ ಸೂಕ್ತ ಪರಿಹಾರ ಶತಸಿದ್ಧ!

ಈಗಲೇ ಕರೆಮಾಡಿ : 9008611444


ಜಾಹಿರಾತು: ವೆರಿಕೋಸ್ ವೇಯ್ನ್ ನಿಂದ ಬಳಲುತ್ತಿದ್ದೀರಾ? ಚಿಂತೆ ಬಿಡಿ ವೆರಿಕೋಸ್ ವೇಯ್ನ್ ಗೆ ಆಪರೇಷನ್ ಇಲ್ಲದೆಯೇ ಚಿಕಿತ್ಸೆ ನೀಡುತ್ತಾರೆ ಖ್ಯಾತ ವೈದ್ಯ ಡಾ. ಉರಾಳ್. ಹೆಚ್ಚಿನ ಮಾಹಿತಿಗಾಗಿ ಈಗಲೇ ಸಂಪರ್ಕಿಸಿ ವೆರಿಕೋಸ್ ವೇಯ್ನ್ ರೋಗಿಗಳ ಆಶಾಕಿರಣ ಆಪರೇಷನ್ ರಹಿತ ಆಯುರ್ವೇದ ಪರಿಹಾರ. ಡಾ. ಉರಾಳ್ ವೆರಿಕೋಸ್ ವೇಯ್ನ್ ಆಯುರ್ವೇದ ಕ್ಯೂರ್ ಸಂಸ್ಥೆ ಶೃಂಗೇರಿ. +91 81053 71042 , 8310191364.
http://www.uralsayurveda.in https://www.facebook.com/DrUrals/