VIRAL VIDEO: ವ್ಯಕ್ತಿಯ ಮೇಲೆ ಬಿದ್ದ ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ಕಂಬ! ; ಸಿಸಿ ಟೀವಿಯಲ್ಲಿ ಸೆರೆಯಾಯ್ತು ಭಯಾನಕ ದೃಶ್ಯ!ನವದೆಹಲಿ: ರಾಜಸ್ಥಾನದ ಭಾರತ್ಪುರದ ಮಾರುಕಟ್ಟೆಯೊಂದರಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ಕಂಬವೊಂದು ಕೆಳಗಿನಿಂದ ಹಾದುಹೋಗುವ ವ್ಯಕ್ತಿಯೊಬ್ಬನ ಮೇಲೆ ಬಿದ್ದಿದೆ. ಇಬ್ಬರು ಯುವಕರು ನಡೆದುಕೊಂಡು ಹೋಗುತ್ತಿರುವ ಸಂದರ್ಭದಲ್ಲಿ ಅದೇ ವೇಳೆ ಒಬ್ಬನ ತಲೆಯ ಮೇಲೆ ಕಂಬ ಮುರಿದು ಬಿದ್ದಿದೆ. ಸ್ಥಳದಲ್ಲಿಯೇ ಆತ ಕುಸಿದು ಬಿದ್ದಿದ್ದಾನೆ. ಸಿಸಿಟಿವಿ ಕ್ಯಾಮೆರಾದಲ್ಲಿ ಸಿಕ್ಕಿಬಿದ್ದ ಘಟನೆಯ ಭಯಾನಕ ವಿಡಿಯೋ ಇದೀಗ ವೈರಲ್ ಆಗಿದೆ. ಯುವಕನಿಗೆ ಗಂಭೀರವಾಗಿ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಲ್ಲಿ ಮಳಿಗೆ ನಿರ್ಮಾಣವಾಗುತ್ತಿದೆ. ಆ ಸಮಯದಲ್ಲಿ ಮೂರನೇ ಮಹಡಿಯ ಕಂಬವು ಜಾರಿ ಬಿದ್ದಿದೆ.

ಇದು ಯುವಕನ ತಲೆಯ ಮೇಲೆಯೇ ಬಿದ್ದಿದ್ದು, ಆತನಿಗೆ ಗಂಭೀರ ಗಾಯಗಳಾಗಿವೆ ಎಂದು ಪೊಲೀಸರು ಹೇಳಿದ್ದಾರೆ. ಇಬ್ಬರು ಸ್ನೇಹಿತರು ಹೆಗಲ ಮೇಲೆ ಕೈಹಾಕಿಕೊಂಡು ಹೋಗುತ್ತಿದ್ದಾರೆ. ಆ ಸಂದರ್ಭದಲ್ಲಿ ಕಂಬ ಕುಸಿದು ಬಿದ್ದು ಪುಡಿಪುಡಿಯಾಗಿದೆ. ಒಬ್ಬಾತ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದ. ಇನ್ನೊಬ್ಬ ಯುವಕ ಸ್ಥಳದಲ್ಲಿಯೇ ಕುಸಿದು ಬಿದ್ದಿದ್ದಾನೆ. ಸಿಸಿಟಿವಿಯಲ್ಲಿ ಈ ಸಂಪೂರ್ಣ ದೃಶ್ಯ ಸೆರೆಯಾಗಿದೆ. ಯುವಕ ರಸ್ತೆಯಲ್ಲಿ ಪ್ರಜ್ಞೆ ತಪ್ಪಿ ಬಿದ್ದದ್ದು, ಕೆಲ ಕ್ಷಣ ಯಾರೂ ಸ್ಥಳಕ್ಕೆ ಹೋಗದೇ ಇರುವುದು ಹಾಗೂ ನಂತರ ಎಲ್ಲರೂ ಬಂದು ಜಮಾಯಿಸಿರುವ ದೃಶ್ಯ ಈ ವಿಡಿಯೋದಲ್ಲಿ ಕಾಣಬಹುದು.

ಜಾಹಿರಾತು: ವೆರಿಕೋಸ್ ವೇಯ್ನ್ ನಿಂದ ಬಳಲುತ್ತಿದ್ದೀರಾ? ಚಿಂತೆ ಬಿಡಿ ವೆರಿಕೋಸ್ ವೇಯ್ನ್ ಗೆ ಆಪರೇಷನ್ ಇಲ್ಲದೆಯೇ ಚಿಕಿತ್ಸೆ ನೀಡುತ್ತಾರೆ ಖ್ಯಾತ ವೈದ್ಯ ಡಾ. ಉರಾಳ್. ಹೆಚ್ಚಿನ ಮಾಹಿತಿಗಾಗಿ ಈಗಲೇ ಸಂಪರ್ಕಿಸಿ ವೆರಿಕೋಸ್ ವೇಯ್ನ್ ರೋಗಿಗಳ ಆಶಾಕಿರಣ ಆಪರೇಷನ್ ರಹಿತ ಆಯುರ್ವೇದ ಪರಿಹಾರ. ಡಾ. ಉರಾಳ್ ವೆರಿಕೋಸ್ ವೇಯ್ನ್ ಆಯುರ್ವೇದ ಕ್ಯೂರ್ ಸಂಸ್ಥೆ ಶೃಂಗೇರಿ. +91 81053 71042 , 8310191364.
http://www.uralsayurveda.in https://www.facebook.com/DrUrals/